ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ರಾಜ್ಯ ಘಟಕದ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ತಮಗೆ ಬೇಕಾದ ಪದಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವ ಮೂಲಕ ಕೆಜೆಪಿ-೨ ರಚನೆ ಮಾಡಿದ್ದಾರೆ ಎಂದು ಯತ್ನಾಳ್ ಕಿಡಿಕಾರಿದ್ದಾರೆ.
ಈ ಹಿಂದೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೆಜೆಪಿ ಭಾಗ-೧ ಪಕ್ಷ ಕಟ್ಟಿದ್ದರು, ಇದೀಗ ಅವರ ಮಗ ಬಿವೈ ವಿಜಯೇಂದ್ರ ಕೆಜೆಪಿ ಭಾಗ-೨ ರನ್ನು ಕಟ್ಟಿದ್ದು, ಇದರ ಆಯುಷ್ಯ ಕೇವಲ ಲೋಕಸಭಾ ಚುನಾವಣೆ ಮುಗಿಯುವ ವರೆಗೆ ಮಾತ್ರ ಎಂದಿದ್ದಾರೆ.
ಲೋಕ ಸಭಾ ಚುನಾವಣೆಯಲ್ಲಿ ಎಲ್ಲಾ ೨೮ ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿದ್ದಾರೆ. ಒಂದೇ ಒಂದಯ ಸ್ಥಾನ ಕಡಿಮೆಯಾದರು ಅವರ ಸ್ಥಾನ ತೆರವು ನಿಶ್ಚಿತ ಎಂದರು.
ರಾಜಕೀಯದಲ್ಲಿ ಸದ್ಯ ಕಳ್ಳರು, ಲಫಂಗರು ಹೆಚ್ಚಾಗಿದ್ದಾರೆ, ಮೌಲ್ಯಾಧಾರಿತ ರಾಜಕಾರಣ ಇಲ್ಲವಾಗಿದೆ. ಪಕ್ಷ ವರಿಷ್ಠರು ಕೀಲಿಯನ್ನು ಕಳ್ಳರ ಕೈಗೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ೨೮ ಸ್ಥಾನ ಬರದೇ ಹೋದರೆ ಕೀಲಿಯನ್ನು ಕಸಿದುಕೊಳ್ಳುತ್ತಾರೆ. ಲೋಕಸಭಾ ಚುನಾವಣೆ ಬಳಿಕ ರಾಜ್ಯ ಬಿಜೆಪಿಯಲ್ಲಿ ಮೇಜರ್ ಸರ್ಜರಿ ಆಗದಿದ್ದರೆ, ಮುಂದಿನ ಕ್ರಮ ನಾನು ಕೈಗೊಳ್ಳುತ್ತೇನೆ ಎಂದು ಎಚ್ಚರಿಸಿದರು.
ಡಿಸಿ ಶಿಲ್ಪಾನಾಗ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…
ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…
ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…
ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…