ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಅವರ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರ ಸಿಬಿಐಗೆ ನೀಡಿದ್ದ ತನಿಖೆಯನ್ನು, ಈಗಿನ ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತು, ಇದನ್ನು ಪ್ರಶ್ನಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ.
ಈ ನಡೆ ಬಗ್ಗೆ ಮಾತನಾಡಿರುವ ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಲು ಎಲ್ಲರಿಗೂ ಹಕ್ಕಿದೆ. ಆದರೆ ಅಂತಿಮ ತೀರ್ಮಾನ ನ್ಯಾಯಾಲಯದ್ದೇ ಆಗಿರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಸಿಎಂ ಅವರು, ‘ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ಹಿಂಪಡೆದಿರುವುದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಉಚ್ಚನ್ಯಾಯಾಲಯದಲ್ಲಿ ದಾವೆ ಹೂಡಿರುವ ಬಗ್ಗೆ ಪ್ರತಿಕ್ರಿಯಿಸಿ, ಹಿಂದಿನ ಸರ್ಕಾರ ಡಿಕೆ ಶಿವಕುಮಾರ್ ಅವರ ವಿರುದ್ಧ ತನಿಖೆಗೆ ನೀಡಿರುವ ಅನುಮತಿ ಕಾನೂನು ಬಾಹಿರವಾಗಿದ್ದು ಆದೇಶವನ್ನು ವಾಪಸ್ ಪಡೆದಿದ್ದೇವೆ ಎಂದರು
ಅಧ್ಯಕ್ಷರ ನೇಮಕಾತಿಯಲ್ಲಿ ಯಾರ ಅಭಿಪ್ರಾಯವನ್ನು ಪಡೆಯಲಾಗಿಲ್ಲ. ಆಯ್ಕೆ ಪ್ರಕ್ರಿಯೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ. ಆಯ್ಕೆ ಪಟ್ಟಿ ಇನ್ನೂ ಅಂತಿಮವಾಗಿಲ್ಲದಿರುವುದರಿಂದ ಈ ಬಗ್ಗೆ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದರು.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…