ಬೆಂಗಳೂರು: ಪಕ್ಷದ ನಾಯಕತ್ವದ ವಿರುದ್ಧ ಹೇಳಿಕೆ ನೀಡಿದ ಸಂಬಂಧ ಕೇಂದ್ರ ಶಿಸ್ತು ಸಮಿತಿ ನೀಡಿದ್ದ ನೋಟಿಸ್‌ಗೆ ಬಿಜೆಪಿ ಶಾಸಕ ಬಸನಗೌಡ್ ಪಾಟೀಲ್ ಯತ್ನಾಳ್ ಉತ್ತರ ನೀಡಿದ್ದಾರೆ.
ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದ ಯತ್ನಾಳ್ ಅವರಿಗೆ ಸಮಿತಿ ಇದೇ 10ರಂದು ನೋಟಿಸ್ ನೀಡಿ 72 ಗಂಟೆಗಳಲ್ಲಿ ಉತ್ತರ ನೀಡುವಂತೆ ಸೂಚಿಸಿತ್ತು. ಇದಕ್ಕೆ 5 ಪುಟಗಳಷ್ಟು ವಿವರವಾದ ಉತ್ತರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಾನು ಯಾವುದೇ ಬಣ ರಾಜಕಾರಣ ಮಾಡಿಲ್ಲ. ಪಕ್ಷದ ಚೌಕಟ್ಟಿನಲ್ಲೇ ವಕ್ಫ್ ಹೋರಾಟ ನಡೆಸಿದ್ದೇವೆ. ಪಕ್ಷಕ್ಕೆ ಧಕ್ಕೆಯಾಗುವಂತಹ ಕೆಲಸವನ್ನು ಮಾಡಿಲ್ಲ ಎಂದು ಉತ್ತರಿಸಿದ್ದಾರೆ.
ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಪಕ್ಷದ ಹಿರಿಯರನ್ನು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತಿಲ್ಲ. ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುವುದಕ್ಕೆ ಹಲವಾರು ಅವಕಾಶಗಳು ದೊರಕಿದ್ದವು. ಆದರೆ, ರಾಜ್ಯಾಧ್ಯಕ್ಷರ ಅಸಮರ್ಥ ನಾಯಕತತ್ವದಿಂದ ಈ ಎಲ್ಲ ಹೋರಾಟಗಳಲ್ಲಿ ಪಕ್ಷ ವಿಫಲವಾಗಿದೆ ಎಂದು ದೂರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ ಪಕ್ಷ ಬಲಪಡಿಸಲು ಈಗಲೇ ಅಧ್ಯಕ್ಷರನ್ನು ಬದಲಿಸಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಮುನ್ನಡೆಸುವವರಿಗೆ ಆ ಹೊಣೆಗಾರಿಕೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎಂದು ಮೂಲಗಳು ಹೇಳಿವೆ.
ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…
ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…
ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು,…
ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…
ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…
ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…