ರಾಜ್ಯ

ಯತ್ನಾಳ್‌ ಅವರ ನಿಜವಾದ ಗುರಿ ಪ್ರಧಾನಿ ಮೋದಿ: ಸಿಎಂ ಸಿದ್ದರಾಮಯ್ಯ

ಮೈಸೂರು : ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಪೋಟೊವನ್ನು ಹಿಡ್ಕೊಂಡು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ನನ್ನ ವಿರುದ್ಧ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ನರೇಂದ್ರ ಮೋದಿ ಅವರು ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನ ತಮ್ಮ ಅಧಿಕೃತ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಮೌಲ್ವಿ ಹಾಶ್ಮಿ ಅವರ ಜೊತೆಗೆ ಇತರ ಬಿಜೆಪಿ ನಾಯಕರು ಮಾತ್ರವಲ್ಲ ಸಾಕ್ಷಾತ್ ನರೇಂದ್ರ ಮೋದಿ ಅವರೂ ಸಂಬಂಧ ಹೊಂದಿರುವುದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿರುವ ಪೋಟೊಗಳು ಸ್ಪಷ್ಟವಾಗಿ ಹೇಳುತ್ತಿವೆ. ದೀರ್ಘಕಾಲದಿಂದ ಹಾಶ್ಮಿ ಅವರಿಗೆ ಅತ್ಯಂತ ಆತ್ಮೀಯರಾಗಿರುವ ಮತ್ತು ಊರಿನಲ್ಲಿ ತನ್ನ ನೆರೆಹೊರೆಯಾಗಿರುವ ಯತ್ನಾಳ್ ಅವರಿಗೆ ಇದು ತಿಳಿದಿರಲಿಲ್ಲ ಎನ್ನುವುದನ್ನು ನಂಬಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷತೆ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನ ತಪ್ಪಿಹೋಗಿರುವುದರಿಂದ ಯತ್ನಾಳ್ ಅವರು ಕೆರಳಿ ಕೆಂಡವಾಗಿದ್ದಾರೆ. ಇದಕ್ಕೆ ಕಾರಣಕರ್ತರಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ವಿರುದ್ಧ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದಲೇ ಮೌಲ್ವಿ ತಸ್ವೀರ್ ಹಾಶ್ಮಿ ಜೊತೆಗಿನ ನನ್ನ ಪೋಟೋವನ್ನು ತೋರಿಸಿ ಆರೋಪ ಮಾಡಿದ್ದಾರೆ. ಈ ಆರೋಪದ ನಂತರ ಮೌಲ್ವಿ ಅವರ ಜೊತೆಗಿನ ಪ್ರಧಾನಿ ನರೇಂದ್ರ ಮೋದಿ ಅವರ ಸಂಬಂಧದ ವಿವರವೂ ಹೊರಬರಲಿದೆ ಎನ್ನುವುದು ಅವರಿಗೆ ಖಂಡಿತ ಗೊತ್ತಿತ್ತು. ಅವೆಲ್ಲವೂ ಬಯಲಾಗಿ ಪ್ರಧಾನಿ ಮತ್ತು ಬಿಜೆಪಿ ನಾಯಕರು ಮುಜುಗರಕ್ಕೀಡಾಗಲಿ ಎನ್ನುವ ದುರುದ್ದೇಶದಿಂದ ನನ್ನ ವಿರುದ್ಧ ಆರೋಪ ಮಾಡುವ ಆಟ ಆಡಿದ್ದಾರೆ ಎಂದು ವ್ಯಂಗವಾಡಿದ್ದಾರೆ.

ಮೌಲ್ವಿ ಹಾಶ್ಮಿ ಅವರ ಜೊತೆಗಿನ ನನ್ನ ಸ್ನೇಹ ಸಂಬಂಧವನ್ನು ನಾನು ಬಹಿರಂಗವಾಗಿಯೇ ಒಪ್ಪಿಕೊಂಡಿದ್ದೇನೆ. ಹಾಶ್ಚಿಯವರೂ ಕೂಡಾ ಅವರ ಮೇಲಿನ ಆರೋಪದ ತನಿಖೆಯನ್ನು ಕೇಂದ್ರ ಸರ್ಕಾರವೇ ನಡೆಸಲಿ ಎಂದು ಸವಾಲು ಹಾಕಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿಯವರು ತನ್ನ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯಿಸಲೇ ಬೇಕಾಗುತ್ತದೆ. ಮೌಲಿ ತನ್ನೀರ್ ಹಾಶ್ಮಿ ಅವರಿಗೆ ನಿಜವಾಗಿ ಐಸಿಎಸ್ ಜೊತೆ ಸಂಬಂಧ ಇದ್ದರೆ ಆ ಬಗ್ಗೆ ತನಿಖೆಗೆ ಪ್ರಧಾನಿಯವರು ತಕ್ಷಣ ಆದೇಶ ನೀಡಬೇಕು ಮತ್ತು ಹಾಶ್ಮಿ ಮತ್ತು ತನ್ನ ಸಂಬಂಧದ ವಿವರವನ್ನು ದೇಶದ ಮುಂದಿಡಬೇಕು. ಇದು ಎರಡೂ ಮಾಡದೆ ಇದ್ದರೆ ಇಂತಹ ಸುಳ್ಳು ಆರೋಪ ಮಾಡುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮವನ್ನಾದರೂ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ರೀತಿಯ ಆರೋಪಗಳನ್ನು ಮಾಡುವುದು ಇದೇ ಮೊದಲ ಸಲವೇನಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಮಕ್ಕಳ ವಿರುದ್ಧ ಪುಂಖಾನುಪುಂಖವಾಗಿ ಆರೋಪ ಮಾಡಿದ್ದಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಬೇಕಾದರೆ ಪಕ್ಷದ ಹೈಕಮಾಂಡಿಗೆ ಎರಡು ಸಾವಿರ ಕೋಟಿ ರೂಪಾಯಿ ಕೊಡಬೇಕಾಗುತ್ತದೆ ಎನ್ನುವ ಗಂಭೀರ ಆರೋಪವನ್ನೂ ಅವರು ಮಾಡಿದ್ದಾರೆ. ಈ ರೀತಿ ಬಹಿರಂಗವಾಗಿ ತಮ್ಮ ಪಕ್ಷದ ಉನ್ನತ ನಾಯಕರ ವಿರುದ್ಧವೇ ಆರೋಪ ಮಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಾಯಿಬಲದ ಹಿಂದೆ ಇರುವ ಶಕ್ತಿ ಯಾವುದು? ಬಿಜೆಪಿಯಲ್ಲಿರುವ ಯಾವ ‘ಜೀ” ಗಳ ಬಲದಿಂದ ಇಂತಹ ಸ್ವಪಕ್ಷೀಯರ ವಿರುದ್ದ ಇಂತಹ ಮಾನಹಾನಿಕರ ಆರೋಪ ಮಾಡಿಯೂ ಅವರೂ ಬಚಾವಾಗುತ್ತಿದ್ದಾರೆ ಎನ್ನುವುದು ಕೂಡಾ ಬಯಲಾಗಬೇಕಾಗಿದೆ ಎಂದು ಸಿಎಂ ಹೇಳಿದ್ದಾರೆ.

ಇಂದಿನ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಸುದ್ದಿಯ ಪ್ರಕಾರ ಮೌಲ್ವಿ ತಸ್ವೀರ್ ಹಾಶ್ಮಿ ಕುಟುಂಬದ ಜೊತೆಯಲ್ಲಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ವ್ಯಾಪಾರ ಸಂಬಂಧ ಕೂಡಾ ಇದೆ ಎನ್ನುವುದು ಬಯಲಾಗಿದೆ. ಯತ್ನಾಳ್ ಅವರ ಆರೋಪದಂತೆ ತನ್ನೀ‌ರ್ ಹಾಶ್ಮಿ ಅವರಿಗೆ ಐಸಿಎಸ್ ಜೊತೆ ಸಂಬಂಧ ಇರುವುದಾಗಿದ್ದರೆ ಅವರ ಜೊತೆಗೆ ವ್ಯವಹಾರದ ಪಾಲುದಾರರಾಗಿರುವ ಯತ್ನಾಳ್ ಅವರಿಗೆ ಅದು ಗೊತ್ತಿರಲಿಲ್ಲವೇ? ಗೊತ್ತಿದ್ದೂ ಸುಮ್ಮನಿರಲು ಕಾರಣವೇನು? ಇಷ್ಟು ಸಮಯದ ನಂತರ ಇಂತಹ ಆರೋಪ ಮಾಡಲು ಕಾರಣಗಳೇನು ಎನ್ನುವುದನ್ನು ಕೂಡಾ ಕೇಂದ್ರ ಸರ್ಕಾರ ತನಿಖೆ ನಡೆಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

https://x.com/siddaramaiah/status/1733025445455835247?s=20

andolanait

Recent Posts

ಓದುಗರ ಪತ್ರ: ಅರ್ಹರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಿ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ…

2 mins ago

ಚಾ. ಬೆಟ್ಟಕ್ಕೆ ಗಂಡಾಂತರ ತರುವ ಕಟ್ಟಡಗಳ ನಿರ್ಮಾಣ ನಿಲ್ಲಿಸಿ

ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ…

12 mins ago

ಚಲನಚಿತ್ರ ವಿಮರ್ಶೆಗಳ ಹೆಸರಿನ ಅನಿಸಿಕೆಗಳೂ ಚಿತ್ರೋದ್ಯಮವೂ

ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…

36 mins ago

ಜಂಬೂಸವಾರಿ ಮುಗಿದಿದೆ; ʼಅಂಬಾರಿʼಗೆ ಬೇಡಿಕೆ ಏರಿದೆ!

ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…

54 mins ago

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

2 hours ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

3 hours ago