ಬೆಂಗಳೂರು: ಅಕ್ಕಿ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಜನಸಾಮಾನ್ಯರಿಗೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗುವಂತೆ ಮಾಡಿದೆ. ಇದರ ನಡುವೆ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ರೂ.29ಕ್ಕೆ ಒಂದು ಕೆಜಿ ಅಕ್ಕಿ ವಿತರಣೆಗೆ ಮುಂದಾಗಿದೆ. ಇದರ ಸಲುವಾಗಿ ಇಂದು ಬೆಂಗಳೂರಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭಾರತ್ ಅಕ್ಕಿ ಯೋಜನೆಗೆ ಚಾಲನೆ ನೀಡಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭಾರತ್ ಬ್ರಾಂಡ್ ಅಕ್ಕಿ ಯೋಜನೆಗೆ ಚಾಲನೆ ನೀಡಿದರು. ಹೀಗಾಗಿ ರಾಜ್ಯದ ಜನತೆಗೆ ಸಿಹಿಸುದ್ದಿ ಎನ್ನುವಂತೆ ಭಾರತ್ ಬ್ರಾಂಡ್ ಹೆಸರಿನಲ್ಲಿ ಕೇಂದ್ರ ಸರ್ಕಾರದಿಂದ ಒಂದು ಕೆಜಿಗೆ ರೂ.29ರಂತೆ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ.
ಇದೀಗ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದ ಬಳಿಕ, ಪ್ರಾಥಮಿಕವಾಗಿ ಮಂಗಳವಾರ ಬೆಂಗಳೂರಿನಲ್ಲಿ ಮಾತ್ರ ಸಿಗಲಿದ್ದು, ನಗರದ ವಿವಿಧೆಡೆ ಭಾರತ್ ಅಕ್ಕಿ ವಾಹನಗಳು ಸಂಚರಿಸಿ ಅಕ್ಕಿ ಮಾರಲಿವೆ. ಬುಧವಾರದಿಂದ ಮಂಡ್ಯದಲ್ಲಿ ಹಾಗೂ ಇನ್ನೊಂದು ವಾರದಲ್ಲಿ ಇತರೆ ಜಿಲ್ಲೆಗಳಲ್ಲಿ ಗ್ರಾಹಕರಿಗೆ ಲಭ್ಯವಾಗೋ ಸಾಧ್ಯತೆ ಇದೆ.
ಬಿಗ್ ಬಾಸ್ಕೆಟ್, ಪ್ಲಿಪ್‌ಕಾರ್ಟ್, ರಿಲೈಯನ್ಸ್ ಸ್ಟೋರ್ಸ್, ಸ್ಟಾರ್ ಹೈಪರ್ ಬಝಾರ್‌ಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಮಂಗಳವಾರ ಸಂಜೆಯಿಂದ ರಿಲೈಯನ್ಸ್ ಸ್ಟೋರ್ಸ್‌ಗಳಲ್ಲಿ ಈ ಅಕ್ಕಿ ಸಿಗಲಿದೆ.
ಇನ್ನೊಂದು ವಾರದ ಬಳಿಕ ಇತರೆ ಸ್ಟೋರ್ಸ್‌ಗಳಲ್ಲಿ ಗ್ರಾಹಕರು ಖರೀದಿ ಮಾಡಬಹುದು. ಭಾರತ್ ಅಕ್ಕಿ ಜೊತೆಗೆ, ಈಗಾಗಲೇ ವಾಹನಗಳಲ್ಲಿ ಕೇಜಿಗೆ ರೂ.27.50 ನಂತೆ ಮಾರುತ್ತಿರುವ ಗೋಧಿ ಹಿಟ್ಟು, ಕೇಜಿಗೆ ರೂ 60 ನಂತೆ ಕಡ್ಲೆ ಬೇಳೆ ಕೂಡ ಸ್ಟೋರ್ಸ್‌ಗಳಲ್ಲಿ ಪಡೆಯಬಹುದಾಗಿದೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…