ರಾಜ್ಯ

ಭಾರತ್ ಅಕ್ಕಿ ಯೋಜನೆಗೆ ಯಡಿಯೂರಪ್ಪ ಚಾಲನೆ !

ಬೆಂಗಳೂರು: ಅಕ್ಕಿ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಜನಸಾಮಾನ್ಯರಿಗೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗುವಂತೆ ಮಾಡಿದೆ. ಇದರ ನಡುವೆ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ರೂ.29ಕ್ಕೆ ಒಂದು ಕೆಜಿ ಅಕ್ಕಿ ವಿತರಣೆಗೆ ಮುಂದಾಗಿದೆ. ಇದರ ಸಲುವಾಗಿ ಇಂದು ಬೆಂಗಳೂರಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭಾರತ್ ಅಕ್ಕಿ ಯೋಜನೆಗೆ ಚಾಲನೆ ನೀಡಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭಾರತ್ ಬ್ರಾಂಡ್ ಅಕ್ಕಿ ಯೋಜನೆಗೆ ಚಾಲನೆ ನೀಡಿದರು. ಹೀಗಾಗಿ ರಾಜ್ಯದ ಜನತೆಗೆ ಸಿಹಿಸುದ್ದಿ ಎನ್ನುವಂತೆ ಭಾರತ್ ಬ್ರಾಂಡ್ ಹೆಸರಿನಲ್ಲಿ ಕೇಂದ್ರ ಸರ್ಕಾರದಿಂದ ಒಂದು ಕೆಜಿಗೆ ರೂ.29ರಂತೆ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ.

ಇದೀಗ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದ ಬಳಿಕ, ಪ್ರಾಥಮಿಕವಾಗಿ ಮಂಗಳವಾರ ಬೆಂಗಳೂರಿನಲ್ಲಿ ಮಾತ್ರ ಸಿಗಲಿದ್ದು, ನಗರದ ವಿವಿಧೆಡೆ ಭಾರತ್ ಅಕ್ಕಿ ವಾಹನಗಳು ಸಂಚರಿಸಿ ಅಕ್ಕಿ ಮಾರಲಿವೆ. ಬುಧವಾರದಿಂದ ಮಂಡ್ಯದಲ್ಲಿ ಹಾಗೂ ಇನ್ನೊಂದು ವಾರದಲ್ಲಿ ಇತರೆ ಜಿಲ್ಲೆಗಳಲ್ಲಿ ಗ್ರಾಹಕರಿಗೆ ಲಭ್ಯವಾಗೋ ಸಾಧ್ಯತೆ ಇದೆ.

ಬಿಗ್ ಬಾಸ್ಕೆಟ್, ಪ್ಲಿಪ್‌ಕಾರ್ಟ್, ರಿಲೈಯನ್ಸ್ ಸ್ಟೋರ್ಸ್, ಸ್ಟಾರ್ ಹೈಪರ್ ಬಝಾರ್‌ಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಮಂಗಳವಾರ ಸಂಜೆಯಿಂದ ರಿಲೈಯನ್ಸ್ ಸ್ಟೋರ್ಸ್‌ಗಳಲ್ಲಿ ಈ ಅಕ್ಕಿ ಸಿಗಲಿದೆ.

ಇನ್ನೊಂದು ವಾರದ ಬಳಿಕ ಇತರೆ ಸ್ಟೋರ್ಸ್‌ಗಳಲ್ಲಿ ಗ್ರಾಹಕರು ಖರೀದಿ ಮಾಡಬಹುದು. ಭಾರತ್ ಅಕ್ಕಿ ಜೊತೆಗೆ, ಈಗಾಗಲೇ ವಾಹನಗಳಲ್ಲಿ ಕೇಜಿಗೆ ರೂ.27.50 ನಂತೆ ಮಾರುತ್ತಿರುವ ಗೋಧಿ ಹಿಟ್ಟು, ಕೇಜಿಗೆ ರೂ 60 ನಂತೆ ಕಡ್ಲೆ ಬೇಳೆ ಕೂಡ ಸ್ಟೋರ್ಸ್‌ಗಳಲ್ಲಿ ಪಡೆಯಬಹುದಾಗಿದೆ.

andolanait

Recent Posts

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

1 hour ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

2 hours ago

ಮಹಾಲಯ ಅಮಾವಾಸ್ಯೆಗೆ ಮ.ಬೆಟ್ಟ ಸಜ್ಜು

ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ  ಹನೂರು: ಮಹಾಲಯ ಅಮಾವಾಸ್ಯೆ…

2 hours ago

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

2 hours ago

ನಲ್ಲೂರು ಅಮಾನಿ ಕೆರೆಗೆ ಹರಿದು ಬಂದ ನೀರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ  ಗುಂಡ್ಲುಪೇಟೆ:…

2 hours ago

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

16 hours ago