Mysore
18
broken clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

ಕಮಲ್‌ ಹಾಸನ್‌ ಕನ್ನಡಿಗರ ಕ್ಷಮೆ ಕೇಳಲೇಬೇಕು: ಮಾಜಿ ಸಿಎಂ ಯಡಿಯೂರಪ್ಪ ಆಗ್ರಹ

kamal hasan

ಬೆಂಗಳೂರು: ನಟ ಕಮಲ್‌ ಹಾಸನ್‌ ಗೌರವಯುತವಾಗಿ ಕನ್ನಡಿಗರ ಕ್ಷಮೆ ಕೇಳಲೇಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕನ್ನಡವೇ ಸತ್ಯ, ಕನ್ನಡವೇ ನಿತ್ಯ. ಇದು ಕನ್ನಡಿಗರ ಘೋಷ ವಾಕ್ಯ ಮಾತ್ರವಲ್ಲ. ಇದು ಕನ್ನಡಾಂಬೆ ತಾಯಿ ಭುವನೇಶ್ವರಿ ದೇವಿಯ ಮೇಲಿರುವ ಕನ್ನಡಿಗರ ದೀಕ್ಷೆ. ಕನ್ನಡ ಯಾವುದೇ ನಿರ್ದಿಷ್ಟ ಭಾಷೆಯಿಂದ ಹುಟ್ಟಿಕೊಂಡಿಲ್ಲ ಎಂದು ಅನೇಕ ಹಿರಿಯ ಭಾಷಾ ಪರಿಣಿತರು ಸಿದ್ಧ ಮಾಡಿ ತೋರಿಸಿದ್ದಾರೆ. ಇತಿಹಾಸ, ಭಾಷಾಶಾಸ್ತ್ರ, ತಜ್ಞರಲ್ಲದ ಕಲಾವಿದ ಕಮಲ್‌ ಹಾಸನ್‌ ಕನ್ನಡ ಭಾಷೆಯ ಬಗ್ಗೆ ಸಂವೇದನಾರಹಿತವಾಗಿ ಮಾತನಾಡಿರುವುದು ಅತ್ಯಂತ ಖಂಡನಾರ್ಹ.

ಇದನ್ನೂ ಓದಿ:- ನಟ ಕಮಲ್‌ ಹಾಸನ್‌ಗೆ ಹೈಕೋರ್ಟ್‌ ಹಿಗ್ಗಾಮುಗ್ಗಾ ತರಾಟೆ

ಅನಗತ್ಯವಾಗಿ ಶಾಂತಿ, ಸೌಹಾರ್ದತೆ, ಸಾಮರಸ್ಯಕ್ಕೆ ಭಂಗವನ್ನುಂಟು ಮಾಡುವ ಅವರ ವರ್ತನೆ ಸರಿಯಲ್ಲ. ಅವರ ಅಭಿಪ್ರಾಯ ಮಂಡನೆಯ ಭರದಲ್ಲಿ ಕೋಟ್ಯಾಂತರ ಕನ್ನಡಿಗರ ಭಾವನೆಗಳಿಗೆ ಘಾಸಿಯುಂಟು ಮಾಡಿದ್ದು, ಅವರು ಗೌರವಯುತವಾಗಿ ಕನ್ನಡ ಮತ್ತು ಕನ್ನಡಿಗರ ಕ್ಷಮೆ ಕೇಳಲೇಬೇಕು. ಕ್ಷಮೆ ಕೇಳುವುದರಿಂದ ಯಾರೂ ಸಣ್ಣವರಾಗುವುದಿಲ್ಲ. ದುರಹಂಕಾರದಿಂದ ಯಾರೂ ದೊಡ್ಡವರಾಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ.

Tags:
error: Content is protected !!