kamal hasan
ಬೆಂಗಳೂರು: ನಟ ಕಮಲ್ ಹಾಸನ್ ಗೌರವಯುತವಾಗಿ ಕನ್ನಡಿಗರ ಕ್ಷಮೆ ಕೇಳಲೇಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕನ್ನಡವೇ ಸತ್ಯ, ಕನ್ನಡವೇ ನಿತ್ಯ. ಇದು ಕನ್ನಡಿಗರ ಘೋಷ ವಾಕ್ಯ ಮಾತ್ರವಲ್ಲ. ಇದು ಕನ್ನಡಾಂಬೆ ತಾಯಿ ಭುವನೇಶ್ವರಿ ದೇವಿಯ ಮೇಲಿರುವ ಕನ್ನಡಿಗರ ದೀಕ್ಷೆ. ಕನ್ನಡ ಯಾವುದೇ ನಿರ್ದಿಷ್ಟ ಭಾಷೆಯಿಂದ ಹುಟ್ಟಿಕೊಂಡಿಲ್ಲ ಎಂದು ಅನೇಕ ಹಿರಿಯ ಭಾಷಾ ಪರಿಣಿತರು ಸಿದ್ಧ ಮಾಡಿ ತೋರಿಸಿದ್ದಾರೆ. ಇತಿಹಾಸ, ಭಾಷಾಶಾಸ್ತ್ರ, ತಜ್ಞರಲ್ಲದ ಕಲಾವಿದ ಕಮಲ್ ಹಾಸನ್ ಕನ್ನಡ ಭಾಷೆಯ ಬಗ್ಗೆ ಸಂವೇದನಾರಹಿತವಾಗಿ ಮಾತನಾಡಿರುವುದು ಅತ್ಯಂತ ಖಂಡನಾರ್ಹ.
ಇದನ್ನೂ ಓದಿ:- ನಟ ಕಮಲ್ ಹಾಸನ್‌ಗೆ ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆ
ಅನಗತ್ಯವಾಗಿ ಶಾಂತಿ, ಸೌಹಾರ್ದತೆ, ಸಾಮರಸ್ಯಕ್ಕೆ ಭಂಗವನ್ನುಂಟು ಮಾಡುವ ಅವರ ವರ್ತನೆ ಸರಿಯಲ್ಲ. ಅವರ ಅಭಿಪ್ರಾಯ ಮಂಡನೆಯ ಭರದಲ್ಲಿ ಕೋಟ್ಯಾಂತರ ಕನ್ನಡಿಗರ ಭಾವನೆಗಳಿಗೆ ಘಾಸಿಯುಂಟು ಮಾಡಿದ್ದು, ಅವರು ಗೌರವಯುತವಾಗಿ ಕನ್ನಡ ಮತ್ತು ಕನ್ನಡಿಗರ ಕ್ಷಮೆ ಕೇಳಲೇಬೇಕು. ಕ್ಷಮೆ ಕೇಳುವುದರಿಂದ ಯಾರೂ ಸಣ್ಣವರಾಗುವುದಿಲ್ಲ. ದುರಹಂಕಾರದಿಂದ ಯಾರೂ ದೊಡ್ಡವರಾಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ.
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…
ಮಂಡ್ಯ : ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನೂ ಸಾಧಿಸುವುದಿಲ್ಲ. ಗೋ ಬ್ಯಾಕ್…