Mysore
30
scattered clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಕನ್ನಡ ರಾಜ್ಯೋತ್ಸವ: ಸರ್ಕಾರಿ ಅಧಿಕಾರಿಗಳ ಐಡಿ ಕಾರ್ಡಿನ ಟ್ಯಾಗ್‌ನಲ್ಲಿ ನಾಡಧ್ವಜದ ಬಣ್ಣ ಕಡ್ಡಾಯ

ಬೆಂಗಳೂರು: ಕರ್ನಾಟಕ ರಾಜ್ಯ ಉದಯವಾಗಿ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಈ ಬಾರಿ ಕನ್ನಡ ರಾಜೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧಾರ ಮಾಡಿದೆ. ಈ ನಡುವೆ ಸರ್ಕಾರದ ಎಲ್ಲಾ ಅಧಿಕಾರಿಗಳಿಗೆ ತಮ್ಮ ಕಚೇರಿಯಲ್ಲಿ ನೀಡುವ ಐಡಿ ಕಾರ್ಡಿನ ಟ್ಯಾಗ್‌ ನಾಡಧ್ವಜ ಬಾವುಟದ ಬಣ್ಣ ಕಡ್ಡಾಯವಾಗಿರಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರದ ಈ ಆದೇಶದ ಮೇರೆಗೆ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಡಿಪಿಎಆರ್ ಅವರು ಕನ್ನಡ ರಾಜೋತ್ಸವದ ಅಂಗವಾಗಿ ಸರ್ಕಾರಿ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ತಮ್ಮ ಐಡಿ ಕಾರ್ಡ್‌ಗಳಲ್ಲಿ ಕೆಂಪು ಮತ್ತು ಹಳದಿ ಬಣ್ಣ ಹೊಂದಿರುವ ಟ್ಯಾಗ್‌ಅನ್ನೇ ಧರಿಸಬೇಕು ಎಂದು ಸೂಚನೆ ನೀಡಿದ್ದಾರೆ.

Tags: