ಮಳವಳ್ಳಿ : ದೇಶದ ಅನೇಕ ಋಷಿ ಮುನಿಗಳು ಹಾಗೂ ಸಾಧಕರಿಂಧ ಸಿದ್ಧಿಸಿದ ಯೋಗಭ್ಯಾಸವು ವಿಶ್ವಕ್ಕೆ ಭಾರತ ನೀಡಿದ ಬಹುದೊಡ್ಡ ಕೊಡುಗೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಮತಾ ಹೇಳಿದರು.
ತಳಗವಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಿದ ಕ್ಯಾತಮ್ಮನಕಟ್ಟೆ ಅಮೃತ ಸರೋವರ ಕೆರೆ ದಡದಲ್ಲಿ 10ನೇ ವಿಶ್ವ ಯೋಗ ದಿನಾಚರಣೆಯಲ್ಲಿ ಮಾತನಾಡಿದ ಅವರು, ವಿಶ್ವ ಸಂಸ್ಥೆ ಸೇರಿ ವಿಶ್ವದ ಅನೇಕ ದೇಶಗಳು ಇಂದು ಯೋಗ ದಿನ ಆಚರಿಸುತ್ತಿವೆ. ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಯೋಗಾಭ್ಯಾಸ ಸಹಕಾರಿಯಾಗಿದೆ. ಕೂಲಿಕಾರರು ದಿನಪೂರ್ತಿ ಕುಟುಂಬ ನಿರ್ವಹಣೆ, ಹೊರಗಡೆ ದುಡಿಮೆ ಹಾಗೂ ಮಕ್ಕಳ ಲಾಲನೆ ಪಾಲನೆಯಲ್ಲಿ ನಿರತರಾಗಿರುವ ಮಹಿಳೆಯರು ಸದಾ ಒತ್ತಡದಲ್ಲಿಯೇ ಜೀವನ ಸಾಗಿಸುತ್ತಿದ್ದಾರೆ. ನಾವು ದಿನ ಪೂರ್ತಿ ದುಡಿಯುತ್ತೇವೆ ನಮಗೇಕೆ ಯೋಗ ಎಂದು ಉದಾಸೀನ ಮಾಡದೇ ಪ್ರತಿ ದಿನ ಬೆಳಗ್ಗೆ ಅಥವಾ ಸಂಜೆ ಒಂದರ್ಧ ಗಂಟೆ ಯೋಗಭ್ಯಾಸಕ್ಕೆ ಮೀಸಲಿಟ್ಟರೆ, ದೈಹಿಕ ಸದೃಢತೆ ಜೊತೆಗೆ ನೆಮ್ಮದಿ ಕಂಡುಕೊಳ್ಳಬಹುದಾಗಿದೆ ಎಂದರು.
ಪ್ರಸ್ತುತ ಬದಲಾದ ಆಹಾರ ಶೈಲಿ, ಜೀವನ ಕ್ರಮದಿಂದ ಇಂದು ಅನೇಕ ರೋಗಗಳು ಕಾಣಿಸಿಕೊಳ್ಳುತ್ತಿವೆ ಅದ್ದರಿಂದ ಮುಂಜಾಗ್ರತೆ ವಹಿಸುವುದು ತುಂಬಾ ಅವಶ್ಯವಾಗಿದೆ. ದುಶ್ಚಟಗಳನ್ನು ತ್ಯಜಿಸಿ, ಉತ್ತಮ ಆಹಾರ, ಗಾಳಿ ಸೇವಿಸುದರ ಮೂಲಕ ಆರೋಗ್ಯ ಕ್ಷಮತೆ ಸಾಧಿಸಬಹುದು. ಗ್ರಾಮೀಣರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಯೋಗ ದಿನಾಚರಣೆ ಏರ್ಪಡಿಸಿರುವುದು ಶ್ಲಾಘನೀಯ ಕಾರ್ಯ ಎಂದರು.
ಈ ಸಂದರ್ಭದಲ್ಲಿ ಪಿಡಿಒ ರೇಣುಕಾ, ಯೋಗ ಶಿಕ್ಷಕರಾದ ಚಂದ್ರಶೇಖರ ಎಂ.ಬಿ, ಶಾಲಾ ಶಿಕ್ಷಕರು, ತಾಲ್ಲೂಕು ಐಇಸಿ ಸಂಯೋಜಕರಾ ಸುನಿಲ್ ಕುಮಾರ್. ಹೆಚ್, ತಾಂತ್ರಿಕ ಸಹಾಯಕರಾದ ನಿತಿನ್ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಶಾಲಾ ಮಕ್ಕಳು, ಕೂಲಿಕಾರರು ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.
ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…
ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಚಳಿ ತುಂಬಾ ಜಾಸ್ತಿಯಿದ್ದು, ಶೀತಗಾಳಿ ಹೆಚ್ಚಾಗಲು ಕರಾವಳಿ ತೀರ ಪ್ರದೇಶದಲ್ಲಾದ ವಾತಾವರಣ ಬದಲಾವಣೆ ಕಾರಣ ಎಂದು…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ ಮಾಡಿರುವ ವಿಚಾರ ಭಾರೀ ವಿವಾದಕ್ಕೆ…
ಕುವೈತ್/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಕುವೈತ್ ಪ್ರವಾಸದಲ್ಲಿದ್ದು, ಇಲ್ಲಿನ ರಾಜ ಶೇಕ್ ಮಿಶಾಲ್ ಅಲ್…
ಕಲಬುರ್ಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ…
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…