Mysore
22
overcast clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಯೋಗೇಶ್ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು : ಯೋಗೇಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ಕೊನೆಗೂ ಶಿಕ್ಷೆ ಪ್ರಕಟವಾಗಿದೆ. 17ನೇ ಆರೋಪಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಇಂದು ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್‌ ಅವರು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದರು.

ಇದರ ಜತೆಗೆ ಯೋಗೀಶ್ ಗೌಡರ್ ಮಕ್ಕಳಿಗೆ 16 ಲಕ್ಷ ರೂ ಹಣವನ್ನು ಪರಿಹಾರವಾಗಿ ನೀಡಲು ಸೂಚನೆ ನೀಡಿದೆ.

ಇದು ಕರ್ನಾಟಕ ರಾಜಕಾರಣದಲ್ಲಿ ಭಾರೀ ದೊಡ್ಡ ಸಂಚಲವನ್ನು ಮೂಡಿಸಿದೆ. ಇದೀಗ ಅವರ ಶಾಸಕ ಸ್ಥಾನಕ್ಕೂ ಕುತ್ತು ಬಂದಿದೆ. ಕೇಂದ್ರ ಸರ್ಕಾರ ತಂದಿರುವ ಪ್ರಜಾ ಪ್ರತಿನಿಧಿ ಕಾಯ್ದೆಯಡಿಯಲ್ಲಿ ಅವರು ಶಾಸಕ ಸ್ಥಾನದಿಂದ ವಜಾ ಕೂಡ ಮಾಡಲಾಗಿದೆ.

Tags:
error: Content is protected !!