munirathna and dk
ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳ ಕುರಿತು ಪ್ರಸ್ತಾಪ ಮಾಡಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾಲೆಳೆದ ಪ್ರಸಂಗ ವಿಧಾನಸಭೆಯಲ್ಲಿ ಜರುಗಿತು.
ಗ್ರೇಟರ್ ಬೆಂಗಳೂರು ವಿಧೇಯಕ ರಚನೆಯ ಬಗ್ಗೆ ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಉತ್ತರ ನೀಡುತ್ತಿದ್ದ ಡಿ.ಕೆ.ಶಿವಕುಮಾರ್, ಬೆಂಗಳೂರಿನ ಶಾಸಕರಿಗೆ ಬೇಡ ಎಂದರೆ ಗ್ರೇಟರ್ ಬೆಂಗಳೂರು ವಿಧೇಯಕವನ್ನು ವಾಪಸ್ ಪಡೆಯಲು ನಾನು ಸಿದ್ಧನಿದ್ದೇನೆ. ಈ ಬಗ್ಗೆ ಸುದೀರ್ಘ ಚರ್ಚೆಯಾಗಲಿ, ಎಲ್ಲರಿಗೂ ಮಾತನಾಡಲು ಅವಕಾಶ ನೀಡಲಾಗುವುದು. ನಾವೇ ಬೆಳೆಸಿದ ಶಾಸಕ ಮುನಿರತ್ನ ಅವರಿಗೂ ಅವಕಾಶ ನೀಡುತ್ತೇವೆ ಎಂದರು.
ಈ ಹಂತದಲ್ಲಿ ಎದ್ದು ನಿಂತ ಮುನಿರತ್ನ ನನ್ನನ್ನು ಮರೆತು ಹೋಗಿದ್ದೀರಾ ಎಂದುಕೊಂಡಿದ್ದೆ. ನೆನಪಿಸಿಕೊಂಡಿದ್ದಕ್ಕೆ ಧನ್ಯವಾದಗಳು ಎಂದರು.
ಅದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ನೀನು ಯಾವುದೋ ಪ್ರಕರಣಗಳಿಗೆ ಸಿಲುಕಿ ಎಲ್ಲೆಲ್ಲೋ ಓಡಾಡುತ್ತಿದ್ದೀಯ. ಹಾಗಾಗಿ ಮರೆತು ಹೋಗಿದ್ದೆ ಎಂದು ಕಾಲೆಳೆದರು. ಈ ಸಂದರ್ಭದಲ್ಲಿ ಮುನಿರತ್ನ ನನ್ನ ಮೇಲಿನ ಪ್ರಕರಣಗಳು ಹಾಗೂ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರಕರಣಗಳನ್ನು ಸೇರಿಸಿ ಸಿಬಿಐ ತನಿಖೆಯಾಗಲಿ ಅಥವಾ ಅದಕ್ಕಿಂತಲೂ ದೊಡ್ಡ ಮಟ್ಟದ ತನಿಖೆ ಇದ್ದರೆ ಅದನ್ನು ಮಾಡಿ ಎಂದು ತಿರುಗೇಟು ನೀಡಿದರು. ಇದು ಕೆಲಕಾಲ ಸ್ವಾರಸ್ಯಕರ ಚರ್ಚೆಗೆ ಗ್ರಾಸವಾಯಿತು.
ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…