ನವದೆಹಲಿ : ನೀವು ಕರ್ನಾಟಕದ ಚೀಫ್ ಮಿನಿಸ್ಟರ್. ಆದರೆ ಕರ್ನಾಟಕದ ಚೀಫ್ ಲೈಯರ್ ಆಗಿದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಗುಡುಗಿದ್ದಾರೆ.
ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನುದಾನ ನೀಡಿಲ್ಲ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ತೇಜಸ್ವಿ ಸೂರ್ಯ, ನೀವು ಕರ್ನಾಟಕದ ಚೀಫ್ ಲೈಯರ್ ಆಗಿದ್ದೀರಿ ಎಂದು ಟೀಕಿಸಿದ್ದಾರೆ.
ಬೆಂಗಳೂರು ಉಪನಗರ ರೈಲು ಯೋಜನೆಗೆ ಕೇಂದ್ರ ಸರ್ಕಾರ ಈಗಾಗಲೇ 500 ಕೋಟಿ ರೂ. ಬಿಡುಗಡೆ ಮಾಡಿದೆ. ಆದರೆ 2023-24 ವರ್ಷಕ್ಕೆ ಕರ್ನಾಟಕ ಸರ್ಕಾರ ಇನ್ನೂ ಯಾವುದೇ ಹಣವನ್ನು ಬಿಡುಗಡೆ ಮಾಡಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಪ್ರಿಯಾಂಕ್ ಖರ್ಗೆ ಅವರ ಸತ್ಯ ತಪಾಸಣೆ ಘಟಕವು ನಮ್ಮ ಸುಳ್ಳುಗಾರ ಮುಖ್ಯಮಂತ್ರಿಯನ್ನು ಪರಿಶೀಲಿಸಲು ಹೆಚ್ಚಿನ ಹೊರೆಯಾಗಿರುತ್ತದೆ ಎಂದು ದಾಖಲೆ ಸಹಿತ ಕಾಂಗ್ರೆಸ್ ನಾಯಕರ ವಿರುದ್ದ ಸಂಸದ ವ್ಯಂಗ್ಯ ಮಾಡಿದ್ದಾರೆ.
ಕೇಂದ್ರದ ಅನುದಾನದ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಸಿದ್ದರಾಮಯ್ಯ ಅವರು, ಬೆಂಗಳೂರು ನಗರದ ಜನರಿಗೆ ಸುಗಮ ಸಂಚಾರ ಸೌಲಭ್ಯ ಕಲ್ಪಿಸುವ ಸಬ್ ಅರ್ಬನ್ ರೈಲು ಯೋಜನೆಯು ಕೇಂದ್ರ ಸರ್ಕಾರದ ಅನುದಾನವಿಲ್ಲದೆ ಇನ್ನೂ ಕನ್ನಡಿಗರ ಕನಸಾಗಿಯೇ ಉಳಿದಿದೆ. ಪ್ರಧಾನಿ ಮೋದಿ ಅವರೇ, ಯಾಕೆ ಕನ್ನಡಿಗರಿಗೆ ಭರವಸೆ ನೀಡಿ ಈ ರೀತಿ ಪದೇ ಪದೇ ವಂಚಿಸುತ್ತಿದ್ದೀರಿ? ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ ಎಂದಿದ್ದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…