ರಾಜ್ಯ

ಕುಮಾರಸ್ವಾಮಿ ಮಾಡಿದ ಅಕ್ರಮಗಳನ್ನೆಲ್ಲಾ ಪಟ್ಟಿ ಮಾಡಿಸ್ತಿದ್ದೀನಿ, ತನಿಖೆಯೂ ಆಗುತ್ತದೆ: ಡಿಸಿಎಂ ಡಿಕೆ ಶಿವಕುಮಾರ್

ರಾಮನಗರ: ಕುಮಾರಸ್ವಾಮಿ ಅವರೇ, ನೀವು ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿ ನನ್ನ ಕುಟುಂಬದ ಆಸ್ತಿಯ ಪಟ್ಟಿ ಕೊಟ್ಟಿರುವುದು ನನಗೆ ಗೊತ್ತಿದೆ. ನನ್ನ ಆಸ್ತಿ ಎಷ್ಟಿದೆ, ಸಿದ್ದರಾಮಯ್ಯ ಅವರ ಆಸ್ತಿ ಎಷ್ಟಿದೆ ಅಂತ ಪಟ್ಟಿ ಕೊಟ್ಟಿದ್ದೀರಿ ಬಹಳ ಸಂತೋಷ. ಇದಕ್ಕೆಲ್ಲಾ ನಾನು ಸಿದ್ಧನಾಗಿದ್ದೇನೆ, ಉತ್ತರ ಕೊಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

ಭಾನುವಾರ ಚನ್ನಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕುಮಾರಸ್ವಾಮಿ ಅವರಿಗೆ ಒಂದು ಮಾತು ಕೇಳುತ್ತೇನೆ. ನಿಮ್ಮ ಕುಟುಂಬದವರು ಈ ಜಾಗಕ್ಕೆ ಬಂದಾಗ ಎಷ್ಟು ಆಸ್ತಿ ಇತ್ತು, ಇಲ್ಲಿ ಬಂದ ನಂತರ ಎಷ್ಟು ಜಮೀನು ಪಡೆದುಕೊಂಡಿರಿ? ಯಾರ ಜಮೀನನ್ನು ಪಡೆದುಕೊಂಡಿರಿ? ಈಗ ಎಷ್ಟು ಎಕರೆ ಆಸ್ತಿಯಾಗಿದೆ? ಆ ಆಸ್ತಿಗಳು ಯಾರ ಹೆಸರಿಂದ ಯಾರ ಹೆಸರಿಗೆ ವರ್ಗಾವಣೆಯಾಗಿದೆ? ಮತ್ತೆ ಮರಳಿ ನಿಮ್ಮ ಹೆಸರಿಗೆ ಬಂದಿದ್ದು ಹೇಗೆ? ಇದಕ್ಕೆಲ್ಲಾ ನೀವು ಉತ್ತರ ನೀಡಬೇಕು. ನೀವು ಮಾಡಿರುವ ಅಕ್ರಮಗಳನ್ನು ಪಟ್ಟಿ ಮಾಡಿಸುತ್ತೇನೆ. ಅದರ ಬಗ್ಗೆಯೂ ತನಿಖೆ ಆಗುತ್ತದೆ ಎಂದು ವಾಗ್ದಾಳಿ ನಡೆಸಿದರು.

ನಿಮ್ಮ ಹಾಗೂ ಬಿಜೆಪಿಯವರ ಕುತಂತ್ರ ನಮಗೆ ತಿಳಿದಿದೆ. ಪ್ರಜಾಪ್ರಭುತ್ವದ ಉಳಿವಿಗಾಗಿ ನಡೆಸುತ್ತಿರುವ ಈ ಜನಾಂದೋಲನದಲ್ಲಿ ಜನರು ನಮಗೆ ನೀಡುತ್ತಿರುವ ಬೆಂಬಲ ಅನನ್ಯ. ಜನರ ಪರವಾಗಿ ನಮ್ಮ ಈ ಹೋರಾಟ ನಿರಂತರವಾಗಿ ನಡೆಯುತ್ತದೆ ಎಂದರು.

ಭ್ರಷ್ಟಾಚಾರಿಗಳಿಂದ, ಭ್ರಷ್ಟಾಚಾರಕ್ಕೋಸ್ಕರ, ಭ್ರಷ್ಟಾಚಾರಿಗಳೇ ಈ ಪಾದಯಾತ್ರೆಯನ್ನು ನಡೆಸುತ್ತಿದ್ದಾರೆ. ಬಿಜೆಪಿ, ಜೆಡಿಎಸ್’ನವರು ಪಾದಯಾತ್ರೆ ಮೂಲಕ ಜನರಿಗೆ ಸುಳ್ಳು ಹೇಳೋಕೆ ಹೊರಟಿದ್ದಾರೆ. ಅವರ ಅವಧಿಯಲ್ಲಿ ಹಲವು ಹಗರಣಗಳು ಆಗಿವೆ. ಈ ಬಗ್ಗೆ ಅವರು ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಬೇಕು. ಪಾದಯಾತ್ರೆ ಮಾಡುತ್ತಿರುವ ನಿಮಗೆ ಯಾವ ನೈತಿಕತೆ ಸ್ವಾಭಿಮಾನವು ಇಲ್ಲ ಎಂದು ಟೀಕಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

4 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

12 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

12 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

12 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

12 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

12 hours ago