Mysore
26
clear sky

Social Media

ಬುಧವಾರ, 25 ಮಾರ್ಚ್ 2026
Light
Dark

ಶಿವಮೊಗ್ಗ| ಮಂಗನ ಕಾಯಿಲೆಗೆ ಯುವಕ ಬಲಿ

ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಸಸಿ ತೋಟದ ನಿವಾಸಿ ಕಿಶೋರ್‌ ಎಂಬಾತನೇ ಮೃತ ಯುವಕನಾಗಿದ್ದಾನೆ. ಜನವರಿ.20ರಿಂದ ಕಿಶೋರ್‌ ವಿಪರೀತ ಜ್ವರದಿಂದ ಬಳಲುತ್ತಿದ್ದ ಕಿಶೋರ್‌ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಜ್ವರ ಹೆಚ್ಚಾದ ಪರಿಣಾಮ ಉಡುಪಿಯ ಮಣಿಪಾಲ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅಲ್ಲೂ ಕೂಡ ಚಿಕಿತ್ಸೆ ಫಲಕಾರಿಯಾಗದೇ ಕಿಶೋರ್‌ ಕೊನೆಯುಸಿರೆಳೆದಿದ್ದಾನೆ.

 

Tags:
error: Content is protected !!