ರಾಮನಗರ: ಪ್ರೀತಿ ಹೆಸರಿನಲ್ಲಿ ಯುವತಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ ಯುವಕನೊಬ್ಬ ಕೈಕೊಟ್ಟಿದ್ದು, ಮನನೊಂದ ಯುವತಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ.
26 ವರ್ಷದ ಯುವತಿ ಆತ್ಮಹತ್ಯೆಗೆ ಯತ್ನಿಸಿದವಳು. ರಾಮನಗರದ ತೆರಿಗೆದೊಡ್ಡಿ ಗ್ರಾಮದ ಯುವಕ ಅರುಣ್ ನಾಯ್ಕ್ ಎಂಬಾತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಪ್ರೀತಿ-ಪ್ರೇಮ ಎಂದು ಸುತ್ತಾಡಿದ್ದಲ್ಲದೇ ಆಕೆಯೊಂದಿಗೆ ದೈಹಿಕ ಸಂಪರ್ಕವನ್ನು ಬೆಳೆಸಿದ್ದನು. ಈಗ ಮದುವೆಯಾಗದೇ ನಾಪತ್ತೆಯಾಗಿದ್ದಾನೆ.
ಕೆಲ ದಿನಗಳ ಹಿಂದೆ ಸಂತ್ರಸ್ತ ಯುವತಿ ಅರುಣ್ ನಾಯ್ಕ್ ವಿರುದ್ಧ ದೂರು ನೀಡಿದ್ದಳು. ಆದರೂ ಈವರೆಗೂ ಆತನ ವಿರುದ್ಧ ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ. ಇದರಿಂದ ಮನನೊಂದು ಯುವತಿ ಡೆತ್‌ನೋಟ್ ಬರೆದಿಟ್ಟು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.




