ಹಾವೇರಿ: ಪ್ರೀತಿಸಲು ಯುವತಿ ಒಪ್ಪಲ್ಲಿಲ್ಲ ಎಂಬ ಕಾರಣಕ್ಕೆ ನೊಂದಿದ್ದ ಯುವಕನೊಬ್ಬ ಯುವತಿ ಮುಂದೆಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಹಾವೇರಿಯ ತಡಸ ಗ್ರಾಮದಲ್ಲಿ ನಡೆದಿದೆ.
ಹುಬ್ಬಳ್ಳಿ ತಾಲೂಕಿನ ಬೆಳಗಲಿ ಗ್ರಾಮದ ಪ್ರವೀಣ(25) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿ. ಈ ಸಂಬಂಧ ತಡಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವಕ ಪ್ರವೀಣ ಹಣ್ಣಿನ ವ್ಯಾಪರ ಮಾಡುತ್ತಿದ್ದ. ತಡಸ ಗ್ರಾಮದ ತಾಯವ್ವದೇವಿ ದೇವಸ್ಥಾನದ ಬಳಿ ಬಂದಿದ್ದ ಆತ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹೆಚಿಕೊಂಡಿದ್ದರು. ತೀವ್ರ ಗಾಯಗೊಂಡಿದ್ದ ಇವರನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಅಲ್ಲಿಯೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವಕ ಪ್ರವೀಣ್ ಕುಂದಗೋಳದ 21ವರ್ಷದ ಯುವತಿ ಜೊತೆ ಸ್ನೇಹ ಬೆಳೆಸಿದ್ದರು. ಬಳಿಕ ಯುವಕ ತಮ್ಮನ್ನು ಪ್ರೀತಿಸುವಂತೆ ಕೋರಿದ್ದ. ಆದರೆ, ಯುವತಿ ತಮ್ಮ ಭವಿಷ್ಯದ ದೃಷ್ಠಿಯಿಂದ ಪ್ರೀತಿಗೆ ಒಪ್ಪಿರಲಿಲ್ಲ. ಇದರಿಂದ ಪ್ರವೀಣ್ ಬೇಸರಗೊಂಡಿದ್ದರು.
ಯುವತಿ ಮುಂದೆಯೇ ಆತ್ಮಹತ್ಯೆ
ಯುವಕ ಪ್ರವೀಣ್ ಶುಕ್ರವಾರ ಬೆಳಿಗ್ಗೆ ಯುವತಿ ಭೇಟಿ ಮಾಡಿ ಪುನಃ ಕೋರಿದ್ದರು. ಅದಕ್ಕೆ ನಿರಾಕರಿಸಿದ ಯುವತಿ ನಮ್ಮದು ಸ್ನೇಹವಷ್ಟೆ ಎಂಬುದಾಗಿ ಹೇಳಿದ್ದರು. ಇದರಿಂದ ಬೇಸರಗೊಂಡ ಪ್ರವೀಣ್ ಬಾಟಲಿಯಲ್ಲಿ ಪೆಟ್ರೋಲ್ ಮೈ ಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡರು. ಸ್ಥಳೀಯರು ಸಹಾಯಕ್ಕೆ ಹೋಗುವಷ್ಟರಲ್ಲಿ, ಇಡೀ ದೇಹಕ್ಕೆ ಬೆಂಕಿ ವ್ಯಾಪಿಸಿತ್ತು ಎಂದು ಮೂಲಗಳೂ ತಿಳಿಸಿವೆ.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…