ಮಂಗಳೂರು: ಯೂಟ್ಯೂಬರ್‌ನಲ್ಲಿ ಸುಳ್ಳಿ ಮಾಹಿತಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಅಭಿಷೇಕ್‌ನನ್ನು ಎಸ್‌ಐಟಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದು, ಈ ವೇಳೆ ಲೈಕ್ಸ್ ಹಾಗೂ ವೀಕ್ಷಣೆಗಾಗಿ ವಿಡಿಯೋ ಮಾಡಿ ಅಪ್‌ಲೋಡ್ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.
ಯುನೈಟೆಡ್ ಮೀಡಿಯಾ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ಅಭಿಷೇಕ್, ಗಿರೀಶ್ ಮಟ್ಟಣ್ಣವರ್ ಸಂದರ್ಶನ ಹಾಗೂ ಸುಳ್ಳು ಮಾಹಿತಿಗಳನ್ನು ಪ್ರಸಾರ ಮಾಡಿದ್ದರು.
6 ತಿಂಗಲ ಹಿಂದೆ ಗಿರೀಶ್ ಮಟ್ಟಣ್ಣವರ್ ಸಂಪರ್ಕಿಸಿದ್ದ ಅಭಿಷೇಕ್ ಸುಳ್ಳು ಮಾಹಿತಿ ಪ್ರಸಾರ ಮಾಡಿದ್ದರು. ಅಲ್ಲದೇ ಪ್ರಕರಣ ದಾಖಲಾಗುವ ಮುನ್ನವೇ ವಿಡಿಯೋ ಮಾಡಿದ್ದರು.
ಇದನ್ನು ಓದಿ: ಧರ್ಮಸ್ಥಳ ವಿರುದ್ಧ ಅಪಪ್ರಚಾರ ಖಂಡಿಸಿ ಕಾಂಗ್ರೆಸ್ ಶಾಸಕರಿಂದ ಧರ್ಮಸ್ಥಳ ಯಾತ್ರೆ
ಸುಜಾತಾ ಭಟ್ ಭೇಟಿ ಅನನ್ಯಾ ಭಟ್ ಕಾಲ್ಪನಿಕ ಕಥೆ ಬಗ್ಗೆ ಹಾಗೂ ಬಂಗ್ಲಗುಡ್ಡಕ್ಕೆ ಭೇಟಿ ನೀಡಿ ಜಯಂತ್ ಹಾಗೂ ಅಭಿಷೇಕ್ ವಿಡಿಯೋ ಮಾಡಿದ್ದರು. ಈ ಬಗ್ಗೆಯೂ ಎಸ್‌ಐಟಿ ಅಧಿಕಾರಿಗಳು ಅಭಿಷೇಕ್‌ನನ್ನು ತೀವ್ರ ವಿಚಾರಣೆ ನಡೆಸಿದ್ದು, ಲೈಕ್ಸ್ ಹಾಗೂ ಹೆಚ್ಚಿನ ವೀವ್ಸ್‌ಗಾಗಿ ತಾನು ಸುಳ್ಳು ಮಾಹಿತಿ ಪ್ರಸಾರ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಅಲ್ಲದೇ ತನ್ನಿಂದ ತಪ್ಪಾಗಿದೆ ಎಂದು ವಿಚಾರಣೆ ವೇಳೆ ಕಣ್ಣೀರಿಟ್ಟಿದ್ದಾರೆ.
ಪ್ರಕರಣ ಸಂಬಂಧ ಮತ್ತಷ್ಟು ಯೂಟ್ಯೂಬರ್‌ಗಳಿಗೂ ಎಸ್‌ಐಟಿ ನೋಟಿಸ್ ನೀಡಲು ಸಿದ್ಧತೆ ನಡೆಸಿದೆ.
ಮಡಿಕೇರಿ: ಕಾಡಾನೆ ದಾಳಿಗೆ ಗ್ರಾಮ ಪಂಚಾಯತ್ ಮಾಜಿ ಸದಸ್ಯೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ. ತಾಲ್ಲೂಕಿನ ವಾಲ್ನೂರಿನಲ್ಲಿ…
ಬೆಂಗಳೂರು: ವಿಧಾನಮಂಡಲ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ನಾಳೆ ಮಾರ್ಚ್.10ರಂದು ಸಂಜೆ ಬೆಂಗಳೂರಿನ…
ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆಯ ಜಯನಗರದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ದಂಪತಿಗಳು ತಮ್ಮ ಎರಡು ವರ್ಷದ ಮಗುವಿನ ಕತ್ತು ಸೀಳಿ ತಾವೂ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಪುರಾತನ ಶ್ರೀ ನಾರಾಯಣಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮವು…
ಬೆಂಗಳೂರು: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಂ ರಚನೆ ಮಾಡಿದ್ದಾರೆ. ಉಪಚುನಾವಣೆಗೆ ಉಸ್ತುವಾರಿ ಸಮಿತಿ ರಚನೆ…
ಬೆಂಗಳೂರು: ಆರ್‌ಎಸ್‌ಎಸ್ ಮುಗಿಸುತ್ತೇವೆ ಎನ್ನುವವರು ಭ್ರಮೆಯಲ್ಲಿದ್ದಾರೆ. ನಮ್ಮ ಸಂಘಟನೆಯನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ ಎಂಬ ಕೇಂದ್ರದ ಮಾಜಿ ಸಚಿವ ಅನಂತ್…