Mysore
20
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಬಂಧನದ ಭೀತಿಯಿಂದ ಪಾರಾದ ಯೂಟ್ಯೂಬರ್‌ ಎಂ.ಡಿ ಸಮೀರ್‌ : ನಿರೀಕ್ಷಣಾ ಜಾಮೀನು ಮಂಜೂರು

sameer

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣದ ಬಗ್ಗೆ ಪ್ರಚೋದನಕಾರಿ ವಿಡಿಯೋ ಮಾಡಿದ್ದ ಯೂಟ್ಯೂಬರ್ ಎಂ.ಡಿ ಸಮೀರ್ ವಿರುದ್ಧ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಎಫ್‌ಐಆರ್‌ ಹಾಕಿರುವ ಪೊಲೀಸರು ಆತನನ್ನು ವಶಕ್ಕೆ ಪಡೆಯಲು ಮುಂದಾಗಿದ್ದರು. ಇದೀಗ ಬಂಧನದ ಭೀತಿ ಎದುರಿಸುತ್ತಿದ್ದ ಸಮೀರ್‌ಗೆ ನ್ಯಾಯಾಲಯ ರಿಲೀಫ್‌ ನೀಡಿದೆ.

ನಿರೀಕ್ಷಣಾ ಜಾಮೀನು ಕೋರಿ ಆಗಸ್ಟ್‌ 19ರಂದು ಸಮೀರ್‌ ಎಂ.ಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿಯನ್ನು ಹಾಕಿದ್ದರು. ಇದೀಗ ಆಗಸ್ಟ್‌ 21ರಂದು ಗುರುವಾರ ಕೋರ್ಟ್‌ ನಿರೀಕ್ಷಣಾ ಜಾಮೀನನ್ನು ಮಂಜೂರು ಮಾಡಿದೆ.

ಸಮೀರ್ ಎ.ಐ ಬಳಸಿ ಅವಹೇಳನಕಾರಿ ವಿಡಿಯೋಗಳನ್ನು ಪ್ರಕಟಿಸಿದ್ದಾರೆ. ಪ್ರಕರಣದ ಬಗ್ಗೆ ತಪ್ಪು ಮಾಹಿತಿ ಹರಡಿದ್ದಾರೆ ಎಂದು ದೂರುದಾರರು ಆರೋಪ ಮಾಡಿದ್ದರು. ಇನ್ನು ಇತ್ತೀಚೆಗೆ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಭಕ್ತರು ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಸಮೀರ್‌ನನ್ನು ಬಂಧಿಸುವಂತೆ ಆಗ್ರಹಿಸಿದ್ದರು. ಸಮೀರ್‌ನ ವಿಡಿಯೋಗಳು ಕೋಟ್ಯಂತರ ಹಿಂದೂ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Tags:
error: Content is protected !!