sameer
ಬೆಳ್ತಂಗಡಿ : ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣದ ಬಗ್ಗೆ ಪ್ರಚೋದನಕಾರಿ ವಿಡಿಯೋ ಮಾಡಿದ್ದ ಯೂಟ್ಯೂಬರ್ ಎಂ.ಡಿ ಸಮೀರ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಎಫ್‌ಐಆರ್ ಹಾಕಿರುವ ಪೊಲೀಸರು ಆತನನ್ನು ವಶಕ್ಕೆ ಪಡೆಯಲು ಮುಂದಾಗಿದ್ದರು. ಇದೀಗ ಬಂಧನದ ಭೀತಿ ಎದುರಿಸುತ್ತಿದ್ದ ಸಮೀರ್‌ಗೆ ನ್ಯಾಯಾಲಯ ರಿಲೀಫ್ ನೀಡಿದೆ.
ನಿರೀಕ್ಷಣಾ ಜಾಮೀನು ಕೋರಿ ಆಗಸ್ಟ್ 19ರಂದು ಸಮೀರ್ ಎಂ.ಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿಯನ್ನು ಹಾಕಿದ್ದರು. ಇದೀಗ ಆಗಸ್ಟ್ 21ರಂದು ಗುರುವಾರ ಕೋರ್ಟ್ ನಿರೀಕ್ಷಣಾ ಜಾಮೀನನ್ನು ಮಂಜೂರು ಮಾಡಿದೆ.
ಸಮೀರ್ ಎ.ಐ ಬಳಸಿ ಅವಹೇಳನಕಾರಿ ವಿಡಿಯೋಗಳನ್ನು ಪ್ರಕಟಿಸಿದ್ದಾರೆ. ಪ್ರಕರಣದ ಬಗ್ಗೆ ತಪ್ಪು ಮಾಹಿತಿ ಹರಡಿದ್ದಾರೆ ಎಂದು ದೂರುದಾರರು ಆರೋಪ ಮಾಡಿದ್ದರು. ಇನ್ನು ಇತ್ತೀಚೆಗೆ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಭಕ್ತರು ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಸಮೀರ್‌ನನ್ನು ಬಂಧಿಸುವಂತೆ ಆಗ್ರಹಿಸಿದ್ದರು. ಸಮೀರ್‌ನ ವಿಡಿಯೋಗಳು ಕೋಟ್ಯಂತರ ಹಿಂದೂ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…