sameer
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಎಲ್ಲದಕ್ಕೂ ಸ್ಪಷ್ಟನೆ ನೀಡುತ್ತೇನೆ ಎಂದು ಯೂಟ್ಯೂಬರ್ ಸಮೀರ್ ಎಂ.ಡಿ ಹೇಳಿದ್ದಾರೆ.
ಈ ಕುರಿತು ಖಾಸಗಿ ವಾಹಿನಿಯೊಂದಿಗೆ ಮಾತನಾಡಿರುವ ಅವರು, ನನಗೆ ಈವರೆಗೂ ಎಸ್‌ಐಟಿಯಿಂದ ಯಾವುದೇ ನೋಟಿಸ್ ಬಂದಿಲ್ಲ. ನನಗೆ ಬೆಳ್ತಂಗಡಿ ಠಾಣೆ ಪೊಲೀಸರಿಂದ ನೋಟಿಸ್ ಬಂದಿತ್ತು. ಅದಕ್ಕಾಗಿ ಮೂರು ದಿನ ಬೆಳ್ತಂಗಡಿ ಠಾಣೆಗೆ ವಿಚಾರಣೆಗೆಂದು ಹೋಗಿದ್ದೆ. ಎಲ್ಲಾ ವಿಚಾರಣೆ ಮುಗಿದಿದೆ. ಎಲ್ಲಾ ವಿಷಯದ ಬಗ್ಗೆಯೂ ಶೀಘ್ರದಲ್ಲಿಯೇ ಕ್ಲಾರಿಟಿ ಕೊಡುತ್ತೇನೆ ಎಂದು ಹೇಳಿದರು.
ಇನ್ನು ವಿದೇಶದಿಂದ ಫಂಡಿಂಗ್ ವಿಚಾರವಾಗಿ ಮಾತನಾಡಿದ ಅವರು, ನಾನು ಆ ವಿಚಾರದ ಬಗ್ಗೆ ಮಾತನಾಡಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಬಳಿಕವೇ ಸತ್ಯಾ ಸತ್ಯತೆ ಹೊರಬರುತ್ತದೆ. ಆರೋಪಗಳಿಗೆಲ್ಲಾ ಉತ್ತರ ಕೊಡಲು ಆಗಲ್ಲ. ತನಿಖೆ ಬಳಿಕ ಪೊಲೀಸರೇ ಎಲ್ಲವನ್ನೂ ಬಹಿರಂಗ ಪಡಿಸುತ್ತಾರೆ ಎಂದು ಹೇಳಿದರು.
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ನಿವಾಸವನ್ನು ಸ್ಮಾರಕ ಮತ್ತು ಮ್ಯೂಸಿಯಂ ಮಾಡಲು ಸರ್ಕಾರ…
ಬೆಂಗಳೂರು : ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ನಿರಂತರವಾಗಿ ಅಧಿಕಾರಿಗಳ ಸಭೆ ಮಾಡುವುದರೊಂದಿಗೆ ರೈತರೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ವಿಮೆ…