Mysore
23
overcast clouds
Light
Dark

ಕಾಂಗ್ರೆಸ್‌ ಸರ್ಕಾರದ ʼಯುವನಿಧಿʼ ಯೋಜನೆ ಜಾರಿಗೆ ದಿನಾಂಕ ಫಿಕ್ಸ್

ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಪಂಚ ಯೋಜನೆಗಳಲ್ಲಿ ಈಗಾಗಲೇ ನಾಲ್ಕು ಯೋಜನೆಗಳು ಜಾರಿಯಾಗಿದ್ದು, ಇದೀಗ ಐದನೇ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಸಿದ್ಧಗೊಂಡಿದೆ. ಈ ಕುರಿತು ಶಿಕ್ಷಣ ಖಾತೆ ಸಚಿವ ಡಾ ಶರಣ ಪ್ರಕಾಶ್‌ ಪಾಟೀಲ್‌ ಟ್ವೀಟ್‌ ಮಾಡಿದ್ದು ಯೋಜನೆಯ ನೋಂದಣಿ ದಿನಾಂಕವನ್ನು ತಿಳಿಸಿದ್ದಾರೆ. ಡಿಸೆಂಬರ್‌ 21ರಿಂದ ಅರ್ಹ ಅಭ್ಯರ್ಥಿಗಳು ಈ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.

“ರಾಜ್ಯ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಇದೇ ಡಿಸೆಂಬರ್ 21 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು ಜನವರಿಯಲ್ಲಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು. ನಾಡಿನ ಯುವಜನತೆಗೆ ಬೆನ್ನೆಲುಬಾಗಲಿರುವ ಈ ಯೋಜನೆಯಿಂದ ಸುಮಾರು 5 ಲಕ್ಷ ಪದವೀಧರರ ಖಾತೆಗೆ ನೇರವಾಗಿ ಹಣ ತಲುಪಲಿದೆ.” ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

 

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ