ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪಂಚ ಯೋಜನೆಗಳಲ್ಲಿ ಈಗಾಗಲೇ ನಾಲ್ಕು ಯೋಜನೆಗಳು ಜಾರಿಯಾಗಿದ್ದು, ಇದೀಗ ಐದನೇ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಸಿದ್ಧಗೊಂಡಿದೆ. ಈ ಕುರಿತು ಶಿಕ್ಷಣ ಖಾತೆ ಸಚಿವ ಡಾ ಶರಣ ಪ್ರಕಾಶ್ ಪಾಟೀಲ್ ಟ್ವೀಟ್ ಮಾಡಿದ್ದು ಯೋಜನೆಯ ನೋಂದಣಿ ದಿನಾಂಕವನ್ನು ತಿಳಿಸಿದ್ದಾರೆ. ಡಿಸೆಂಬರ್ 21ರಿಂದ ಅರ್ಹ ಅಭ್ಯರ್ಥಿಗಳು ಈ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.
“ರಾಜ್ಯ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಇದೇ ಡಿಸೆಂಬರ್ 21 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು ಜನವರಿಯಲ್ಲಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು. ನಾಡಿನ ಯುವಜನತೆಗೆ ಬೆನ್ನೆಲುಬಾಗಲಿರುವ ಈ ಯೋಜನೆಯಿಂದ ಸುಮಾರು 5 ಲಕ್ಷ ಪದವೀಧರರ ಖಾತೆಗೆ ನೇರವಾಗಿ ಹಣ ತಲುಪಲಿದೆ.” ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.
ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…
ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ…
ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸುವಂತೆ ಎಂಎಲ್‌ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…
ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…