ಬೆಂಗಳೂರು: ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷ ತಾರಕ್ಕಕ್ಕೇರಿರುವ ನಡುವೆಯೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೇಂದ್ರ ಸರ್ಕಾರ z ಶ್ರೇಣಿ ಭದ್ರತೆ ಕಲ್ಪಿಸಿದೆ.
ಗುಪ್ತಚರ ಇಲಾಖೆಯ ಇತ್ತೀಚಿನ ಬೆದರಿಕೆಯ ವರದಿಯ ನಂತರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈ ಮೂಲಕ ಇನ್ನು ಮುಂದೆ ಸಿಆರ್‌ಪಿಎಫ್ ಸಿಬ್ಬಂದಿ ರಾಜ್ಯಪಾಲ ರಕ್ಷಣೆ ಜವಾಬ್ದಾರಿ ವಹಿಸಿಕೊಳ್ಳಲಿದೆ. ಕಳೆದ ಕೆಲದಿನಗಳಿಂದ ರಾಜ್ಯಪಾಲರು ಬುಲೆಟ್ ಫ್ರೊಫ್ ಕಾರು ಪಡೆದಿದ್ದರು. ಇದೀಗ z ಶ್ರೇಣಿಯ ಭದ್ರತೆ ಮಹತ್ವ ಪಡೆದುಕೊಂಡಿದೆ.
ಮುಡಾ ನಿವೇಶನ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ನೀಡಿದ ಬಳಿಕ ಆಡಳಿತಾರೂಢ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಹಾಗೂ ಸಚಿವರು ರಾಜ್ಯಪಾಲರ ವಿರುದ್ಧ ನೇರವಾಗಿ ತಿರುಗಿಬಿದ್ದಿದ್ದರು.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…