ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಜಮೀರ್ ಅಹಮದ್ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್ ಅಹಮದ್ ಹೇಳಿಕೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಯಾರು ಸಹ ಬಣ್ಣದ ಬಗ್ಗೆ ಹಾಗೂ ಹಾವ-ಭಾವದ ಬಗ್ಗೆ ಮಾತನಾಡುವುದು ಸರಿಯಲ್ಲ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಯಾರು ವೈಯಕ್ತಿಕವಾಗಿ ನಿಂದನೆ ಮಾಡಬಾರದು ಎಂದರು.
ಮಾಜಿ ಸಚಿವ ಅರಗ ಜ್ಞಾನೇಂದ್ರ ಅವರು ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಹೇಳಿಕೆ ನೀಡಿದ್ದರು. ಈ ಹೇಳಿಕೆಗಳ ವೇಳೆ ಖರ್ಗೆ ಮುಖ ಸುಟ್ಟು ಹೋದ ಹಾಗೆ ಕಾಣಿಸುತ್ತದೆ. ಅವರ ಚರ್ಮ ಸುಟ್ಟು ಹೋಗಿದೆ, ಬ್ಲ್ಯಾಕ್ ಆಗಿದೆ ಎಂದು ಹೇಳಿದ್ದರು. ಆ ಸಂದರ್ಭದಲ್ಲಿ ಯಾಕೆ ಅರಗ ಜ್ಞಾನೇಂದ್ರ ವಿರುದ್ಧ ಬಿಜೆಪಿ-ಜೆಡಿಎಸ್ ಅವರು ವಿರೋಧ ವ್ಯಕ್ತಪಡಿಸಲಿಲ್ಲ. ಯಾಕೆ ಇದು ರಾಷ್ಟ್ರೀಯ ಸುದ್ದಿ ಆಗಲಿಲ್ಲ ಎಂದು ಪ್ರಶ್ನೆ ಮಾಡಿದರು.