Categories: ರಾಜ್ಯ

ಜಮೀರ್‌ ಅಹಮದ್‌ ಖಾನ್‌ ನೀಡಿರುವ ಹೇಳಿಕೆ ಸರಿಯಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಜಮೀರ್‌ ಅಹಮದ್‌ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್‌ ಅಹಮದ್‌ ಹೇಳಿಕೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಯಾರು ಸಹ ಬಣ್ಣದ ಬಗ್ಗೆ ಹಾಗೂ ಹಾವ-ಭಾವದ ಬಗ್ಗೆ ಮಾತನಾಡುವುದು ಸರಿಯಲ್ಲ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಯಾರು ವೈಯಕ್ತಿಕವಾಗಿ ನಿಂದನೆ ಮಾಡಬಾರದು ಎಂದರು.

ಮಾಜಿ ಸಚಿವ ಅರಗ ಜ್ಞಾನೇಂದ್ರ ಅವರು ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಹೇಳಿಕೆ ನೀಡಿದ್ದರು. ಈ ಹೇಳಿಕೆಗಳ ವೇಳೆ ಖರ್ಗೆ ಮುಖ ಸುಟ್ಟು ಹೋದ ಹಾಗೆ ಕಾಣಿಸುತ್ತದೆ. ಅವರ ಚರ್ಮ ಸುಟ್ಟು ಹೋಗಿದೆ, ಬ್ಲ್ಯಾಕ್‌ ಆಗಿದೆ ಎಂದು ಹೇಳಿದ್ದರು. ಆ ಸಂದರ್ಭದಲ್ಲಿ ಯಾಕೆ ಅರಗ ಜ್ಞಾನೇಂದ್ರ ವಿರುದ್ಧ ಬಿಜೆಪಿ-ಜೆಡಿಎಸ್‌ ಅವರು ವಿರೋಧ ವ್ಯಕ್ತಪಡಿಸಲಿಲ್ಲ. ಯಾಕೆ ಇದು ರಾಷ್ಟ್ರೀಯ ಸುದ್ದಿ ಆಗಲಿಲ್ಲ ಎಂದು ಪ್ರಶ್ನೆ ಮಾಡಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಯುದ್ಧಕ್ಕೆ ದಿನಾಂಕ ಫಿಕ್ಸ್: ‘ವಿಜಯದಶಮಿ’ಗೆ ಸಮರ ಸಾರಿದ ಕೇಂದ್ರ ಸಚಿವ ಎಚ್‌ಡಿಕೆ

ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…

8 hours ago

ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ಘೋಷಿಸಿದ ಪಾಕ್‌

ಇಸ್ಲಾಮಾಬಾದ್:‌ ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…

8 hours ago

ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ

ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…

9 hours ago

ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…

9 hours ago

ಹನೂರು: ಬಿಸಿಯೂಟಕ್ಕೂ ನೀರಿಲ್ಲ – ಖಾಲಿ ಬಿಂದಿಗೆ ಹಿಡಿದು ವಿದ್ಯಾರ್ಥಿಗಳ ಪ್ರತಿಭಟನೆ

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…

10 hours ago

ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…

13 hours ago