ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಷಿಕ್ಯೂಷನ್ ಹೊರಡಿಸಿರುವ ರಾಜ್ಯಪಾಲರ ವಿರುದ್ಧ ಇಡೀ ಕಾಂಗ್ರೆಸ್ ಪಾಳಯವೇ ಮುಗಿಬಿದ್ದಿದೆ.
ಈ ಸಂಬಂಧ ಬೆಂಗಳೂರಿನಲ್ಲಿಂದು ಸಚಿವ ಜಮೀರ್ ಅಹ್ಮದ್ ಅವರು ಮಾತನಾಡಿದ್ದು, ರಾಜ್ಯಪಾಲರಿಗೆ ಪೊಲಿಟಿಕಲ್ ಪ್ರಷರ್ ಇರುವುದರಿಂದಾಗಿ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಆದೇಶ ಹೊರಡಿಸಿದ್ದಾರೆ.
ಮುಡಾ ಹರರಣ ಸಂಬಂಧ ಜೆಡಿಎಸ್ ಹಾಗೂ ಬಿಜೆಪಿ ಮಿತ್ರಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ಮೈಸೂರು ಚಲೋ ಪಾದಯಾತ್ರೆಯನ್ನು ಹತ್ತು ದಿನಗಳ ಕಾಲ ಮಾಡಿದರೂ ಏನು ಪ್ರಯೋಜವಾಗದ ಹಿನ್ನೆಲೆಯಲ್ಲಿ ಈ ರೀತಿಯ ಷಡ್ಯಂತರ ನಡೆಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ನ್ಯಾಯಾಲಯದ ಮೇಲೆ ನಮಗೆ ವಿಶ್ವಾಸವಿದೆ. ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಜಮೀರ್ ಹೇಳಿದರು.





