ರಾಜ್ಯ

ಹಣ ಪಡೆದು ಮನೆ ಕೊಟ್ಟರೆ ಒಳ್ಳೆಯದಾಗುತ್ತಾ? ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಪ್ರಶ್ನೆ

ಬೆಂಗಳೂರು: ವಸತಿ ಇಲಾಖೆಯಲ್ಲಿ ಹಣ ಪಡೆದು ಮನೆ ಹಂಚಿಕೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಪ್ರತಿಕ್ರಿಯೆ ನೀಡಿದ್ದು, ಬಿ.ಆರ್.ಪಾಟೀಲ್‌ ಆರೋಪದ ಬಗ್ಗೆ ಸಿಬಿಐ ತನಿಖೆಯಾಗಲಿ ಎಂದು ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಣ ಪಡೆದು ಮನೆ ಕೊಟ್ಟರೆ ನನ್ನ ಕುಟುಂಬಕ್ಕೆ ಒಳ್ಳೆಯದಾಗುತ್ತಾ? ಬಡವರ ಬಳಿ ಹಣ ತೆಗೆದುಕೊಂಡರೆ ಹುಳ ಬಿದ್ದು ಸಾಯ್ತಾರೆ. ಬಿ.ಆರ್.ಪಾಟೀಲ್‌ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ 14 ಲಕ್ಷ ಮನೆ ಹಂಚಿಕೆ ಮಾಡಲಾಗಿತ್ತು. ನಂತರ ಬಂದ ಸರ್ಕಾರ 5.8 ಲಕ್ಷ ಮನೆಗಳನ್ನು ನೀಡಿತ್ತು. ಮೂರು ಹಂತದಲ್ಲಿ ನಾವು ಮನೆಗಳನ್ನು ಹಂಚಿಕೆ ಮಾಡುತ್ತೇವೆ. ಈಗ ನಾವು ಯಾವುದೇ ಹೊಸ ಟಾರ್ಗೆಟ್‌ ನೀಡಿಲ್ಲ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಬಿ.ಆರ್.ಪಾಟೀಲ್‌ ಅವರು ಸಚಿವರು ಹಣ ಪಡೆದಿದ್ದಾರೆ ಎಂದಿದ್ದಾರಾ.? ಬಿ.ಆರ್.ಪಾಟೀಲ್‌ ಹೇಳಿಕೆ ಬಗ್ಗೆ ತನಿಖೆ ಆಗಲಿ. ಬೇಕಾದರೆ ಸಿಬಿಐ ತನಿಖೆಗೆ ಕೊಡಲಿ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

4 hours ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

4 hours ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

4 hours ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

4 hours ago

ಗರ್ಭಕೋಶ ಕ್ಯಾನ್ಸರ್‌ಗೆ ಲಸಿಕೆ ಅಸ್ತ್ರ

ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್‌ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…

4 hours ago

ಕೊಡಗಿನಲ್ಲಿ ಇಂದು ಕೈಲ್‌ಪೊಳ್ದ್ ಸಂಭ್ರಮ

ಎಸ್.ಎ. ಹುಸೇನ್ ಆಯುಧಗಳಿಗೆ ವಿಶೇಷ ಪೂಜೆ; ಜಿಲ್ಲೆಯಾದ್ಯಂತ ಸಂಭ್ರಮದ ಹಬ್ಬದಾಚರಣೆಗೆ ಸಿದ್ಧತೆ ಮಡಿಕೇರಿ: ಕೊಡಗಿನ ವಿಶಿಷ್ಟ ಸಂಸ್ಕೃತಿ ಹಾಗೂ ಪರಂಪರೆಯ…

4 hours ago