ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರೆ ನಾನು ಸೂಸೈಡ್ ಬಾಂಬ್ ಹಾಕಿಕೊಂಡು ಪಾಕಿಸ್ತಾನಕ್ಕೆ ಹೋಗಲು ಸಿದ್ಧ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಪುನರುಚ್ಛರಿಸಿದ್ದಾರೆ.
ಈ ಕುರಿತು ಕಲಬುರ್ಗಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತೀಯರು ಮನಸ್ಸು ಮಾಡಿದರೆ ಎರಡೇ ದಿನಕ್ಕೆ ಪಾಕಿಸ್ತಾನವನ್ನು ನಿರ್ಣಾಮ ಮಾಡಬಹುದು ಎಂದರು.
ಆಪರೇಷನ್ ಸಿಂಧೂರ ಯಶಸ್ವಿಯಾಗಲಿ ಎಂದು ನಾವೆಲ್ಲಾ ನಿನ್ನೆ ಮಸೀದಿಗಳಲ್ಲಿ ಪಾರ್ಥನೆ ಮಾಡಿದ್ದೇವೆ. ಪಾಕಿಸ್ತಾನದ ಬಳಿ ಏನೇನೂ ಇಲ್ಲ. ಕೇಂದ್ರ ಸರ್ಕಾರ ಉತ್ತಮ ನಿರ್ಧಾರ ಕೈಗೊಂಡಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರೆ ನಾನು ಸೂಸೈಡ್ ಬಾಂಬ್ ಇಟ್ಟುಕೊಂಡು ಪಾಕ್ ಹೋಗಲು ಸಿದ್ಧನಿದ್ದೇನೆ ಎಂದು ಪುನರುಚ್ಛರಿಸಿದರು.
ಇದನ್ನೂ ಓದಿ:- ಆಪರೇಷನ್ ಸಿಂಧೂರ: ಭಾರತಕ್ಕೆ ಬೇಕಿದ್ದ 5 ಉಗ್ರರು ಮಟಾಶ್
ಇನ್ನು ಪಾಕಿಸ್ತಾನ ಒಂದು ಠುಸ್ ಪಟಾಕಿಯಂತಿದೆ. ನಮ್ಮ ದೇಶಕ್ಕಾಗಿ ನಾನು ಏನನ್ನೂ ಮಾಡಲು ಸಹ ಸಿದ್ಧ. ಪಾಕ್‌ನಲ್ಲಿ ಅಡಗಿರುವ ಉಗ್ರರನ್ನು ಸದೆಬಡಿಯಬೇಕು ಎಂದು ಆಗ್ರಹಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…