ಶಿವಮೊಗ್ಗ: ನಾನೊಬ್ಬ ನಂಬಿಗಸ್ಥ ಮುಸಲ್ಮಾನ ಇರಬಹುದು, ಆದರೆ ಅದಕ್ಕೂ ಮೊದಲು ನಾನೊಬ್ಬ ಹೆಮ್ಮೆಯ ಭಾರತೀಯ ಮತ್ತು ನಾನು ಕನ್ನಡಿಗನಾಗಿದ್ದೇನೆ. ಆ ನಂತರ ನಾನೊಬ್ಬ ಮುಸಲ್ಮಾನ ಎಂದು ಹೇಳಿಕೊಳ್ಳಲು ನನಗೆ ಅಭಿಮಾನವಾಗುತ್ತದೆ ಎಂದು ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಇಂದು(ಫೆಬ್ರವರಿ. 25) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾರಣಿಗಳನ್ನು ಎಲ್ಲಾ ಸಮಾಜದ ಜನರು ನಂಬಿರುತ್ತಾರೆ. ನಾವು ಜಾತಿ ಮತ್ತ ಧರ್ಮದ ರಾಜಕಾರಣ ಮಾಡಲು ಹೋದರೆ, ದೇವರು ಸಹ ಮೆಚ್ಚಲಾರ ನಾಡಿನ ಸಮಸ್ತ ಜನ ಪ್ರತಿನಿಧಿಗಳಾಗಿರುವ ನಾವು ಜಾತಿ ಹಾಗೂ ಧರ್ಮ ರಾಜಕಾರಣ ಮಾಡಿದರೆ ನಮ್ಮ ಮಕ್ಕಳಿಗೆ ಖಂಡಿತವಾಗಿಯೂ ಒಳ್ಳೆಯದಾಗುವುದಿಲ್ಲ ಎಂದಿದ್ದಾರೆ.
ರಾಜಕೀಯ ಕ್ಷೇತ್ರಕ್ಕೆ ಬಂದ ಮೇಲೆ ದಯವಿಟ್ಟು ಯಾರೂ ಜಾತಿ ರಾಜಕಾರಣ ಮತ್ತು ಧರ್ಮ ರಾಜಕಾರಣ ಮಾಡಬಾರದು ಎಂಬುದು ನನ್ನ ಅಭಿಪ್ರಾಯವಾಗಿದೆ. ರಾಜಕೀಯ ನಾಯಕರು ಜಾತಿ ಮತ್ತು ಧರ್ಮವನ್ನು ಅವರ ಮನೆಯಲ್ಲೇ ಮಾಡಬೇಕೇ ಹೊರತು, ಸಮಾಜದಲ್ಲಿ ಅಲ್ಲ. ಅವರು ಸಮಾಜಕ್ಕೆ ಆದರ್ಶವಾಗಿರಬೇಕು ಎಂಬ ತತ್ವದಲ್ಲಿ ನಾನು ನಂಬಿಕೆ ಇಟ್ಟಿದ್ದೇನೆ. ಹೀಗಾಗಿ ರಾಜಕಾರಣಿಗಳು ಜಾತಿ ಮತ್ತು ಧರ್ಮವನ್ನು ರಾಜಕಾರಣಕ್ಕೆ ಎಳೆದು ತರುವುದನ್ನು ನಿಲ್ಲಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದೇ ಸಂದರ್ಭದಲ್ಲಿ ಬೆಳಗಾವಿಯ ಕಂಡಕ್ಟರ್ ಮೇಲಿನ ಹಲ್ಲೆಗೆ ಪ್ರತಿಕ್ರಿಯೆ ನೀಡಿದ ಅವರು, ಕೆಲವು ಪುಂಡರ ಗುಂಪು ಕನ್ನಡಿಗರು ಹಾಗೂ ಮರಾಠಿಗರ ಮಧ್ಯೆದ ಸೌಹಾರ್ದವನ್ನು ಹಾಳುಮಾಡುವ ಹುನ್ನಾರ ನಡೆಸುತ್ತಿವೆ ಎಂದು ಪರೋಕ್ಷವಾಗಿ ಎಂಇಎಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಮೈಸೂರು : ಮೈಸೂರಿನಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಸುಮಾರು 10 ಕೋಟಿ ರೂ. ಮೌಲ್ಯದ…
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಮರಣೋತ್ತರ…
ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಪರಿಷತ್ತಿನ ಅಧಿವೇಶನದ…
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…
ನಂಜನಗೂಡು: ಜಮೀನಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…
ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ ದಿನದ ಅಂಗವಾಗಿ ಸ್ವಾತಂತ್ರ್ಯಹೋರಾಟಗಾರ ತಗಡೂರು ಗಾಂಧಿ ಎಂದೇ ಖ್ಯಾತರಾಗಿದ್ದ ರಾಮಚಂದ್ರರಾಯರಿಂದ ಸ್ಥಾಪಿತವಾದ ತಗಡೂರು ಖಾದಿ ಕೇಂದ್ರದಲ್ಲಿ…