ರಾಜ್ಯ

ನಾನೊಬ್ಬ ಭಾರತೀಯ, ಕನ್ನಡಿಗ ಆನಂತರ ನಾನೊಬ್ಬ ಮುಸಲ್ಮಾನ: ಜಮೀರ್‌ ಅಹಮದ್‌ ಖಾನ್‌

ಶಿವಮೊಗ್ಗ: ನಾನೊಬ್ಬ ನಂಬಿಗಸ್ಥ ಮುಸಲ್ಮಾನ ಇರಬಹುದು, ಆದರೆ ಅದಕ್ಕೂ ಮೊದಲು ನಾನೊಬ್ಬ ಹೆಮ್ಮೆಯ ಭಾರತೀಯ ಮತ್ತು ನಾನು ಕನ್ನಡಿಗನಾಗಿದ್ದೇನೆ. ಆ ನಂತರ ನಾನೊಬ್ಬ ಮುಸಲ್ಮಾನ ಎಂದು ಹೇಳಿಕೊಳ್ಳಲು ನನಗೆ ಅಭಿಮಾನವಾಗುತ್ತದೆ ಎಂದು ಸಚಿವ ಬಿ.ಜೆಡ್. ಜಮೀರ್‌ ಅಹಮದ್‌ ಖಾನ್‌ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಇಂದು(ಫೆಬ್ರವರಿ. 25) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾರಣಿಗಳನ್ನು ಎಲ್ಲಾ ಸಮಾಜದ ಜನರು ನಂಬಿರುತ್ತಾರೆ. ನಾವು ಜಾತಿ ಮತ್ತ ಧರ್ಮದ ರಾಜಕಾರಣ ಮಾಡಲು ಹೋದರೆ, ದೇವರು ಸಹ ಮೆಚ್ಚಲಾರ ನಾಡಿನ ಸಮಸ್ತ ಜನ ಪ್ರತಿನಿಧಿಗಳಾಗಿರುವ ನಾವು ಜಾತಿ ಹಾಗೂ ಧರ್ಮ ರಾಜಕಾರಣ ಮಾಡಿದರೆ ನಮ್ಮ ಮಕ್ಕಳಿಗೆ ಖಂಡಿತವಾಗಿಯೂ ಒಳ್ಳೆಯದಾಗುವುದಿಲ್ಲ ಎಂದಿದ್ದಾರೆ.

ರಾಜಕೀಯ ಕ್ಷೇತ್ರಕ್ಕೆ ಬಂದ ಮೇಲೆ ದಯವಿಟ್ಟು ಯಾರೂ ಜಾತಿ ರಾಜಕಾರಣ ಮತ್ತು ಧರ್ಮ ರಾಜಕಾರಣ ಮಾಡಬಾರದು ಎಂಬುದು ನನ್ನ ಅಭಿಪ್ರಾಯವಾಗಿದೆ. ರಾಜಕೀಯ ನಾಯಕರು ಜಾತಿ ಮತ್ತು ಧರ್ಮವನ್ನು ಅವರ ಮನೆಯಲ್ಲೇ ಮಾಡಬೇಕೇ ಹೊರತು, ಸಮಾಜದಲ್ಲಿ ಅಲ್ಲ. ಅವರು ಸಮಾಜಕ್ಕೆ ಆದರ್ಶವಾಗಿರಬೇಕು ಎಂಬ ತತ್ವದಲ್ಲಿ ನಾನು ನಂಬಿಕೆ ಇಟ್ಟಿದ್ದೇನೆ. ಹೀಗಾಗಿ ರಾಜಕಾರಣಿಗಳು ಜಾತಿ ಮತ್ತು ಧರ್ಮವನ್ನು ರಾಜಕಾರಣಕ್ಕೆ ಎಳೆದು ತರುವುದನ್ನು ನಿಲ್ಲಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದೇ ಸಂದರ್ಭದಲ್ಲಿ ಬೆಳಗಾವಿಯ ಕಂಡಕ್ಟರ್‌ ಮೇಲಿನ ಹಲ್ಲೆಗೆ ಪ್ರತಿಕ್ರಿಯೆ ನೀಡಿದ ಅವರು, ಕೆಲವು ಪುಂಡರ ಗುಂಪು ಕನ್ನಡಿಗರು ಹಾಗೂ ಮರಾಠಿಗರ ಮಧ್ಯೆದ ಸೌಹಾರ್ದವನ್ನು ಹಾಳುಮಾಡುವ ಹುನ್ನಾರ ನಡೆಸುತ್ತಿವೆ ಎಂದು ಪರೋಕ್ಷವಾಗಿ ಎಂಇಎಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಅರ್ಚನ ಎಸ್‌ ಎಸ್

Recent Posts

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

22 mins ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

31 mins ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

4 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

4 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

4 hours ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

4 hours ago