ರಾಜ್ಯ

ಜಿ.ಪಂ.–ತಾ.ಪಂ. ಚುನಾವಣೆಗೆ ಹಳೆಯ ಮತದಾರರ ಪಟ್ಟಿ ಬಳಕೆ ಸಾಧ್ಯತೆ: ಈಶ್ವರ್‌ ಖಂಡ್ರೆ

ಬೆಂಗಳೂರು: ಮುಂಬರುವ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ ಚುನಾವಣೆಗಳನ್ನು ಹೊಸ ಎಸ್‌ಐಆರ್‌ ಪಟ್ಟಿಯ ಬದಲು ಹಳೆಯ ಮತದಾರರ ಪಟ್ಟಿಯ ಆಧಾರದ ಮೇಲೆ ನಡೆಸುವ ಸಾಧ್ಯತೆಯಿದೆ ಎಂದು ಈಶ್ವರ್‌ ಖಂಡ್ರೆ ಹೇಳಿದ್ದಾರೆ.

ಬೀದರ್‌ನಲ್ಲಿ ಮಾತನಾಡಿದ ಅವರು, ಹೊಸ ಎಸ್‌ಐಆರ್‌ ಮತದಾರರ ಪಟ್ಟಿ ಇನ್ನೂ ಅಧಿಕೃತವಾಗಿ ಸರ್ಕಾರದ ಕೈಸೇರಿಲ್ಲ. ಪರಿಷ್ಕೃತ ಪಟ್ಟಿಯಿಂದ ಸಾವಿರಾರು ಅರ್ಹ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ ಎಂಬ ಆರೋಪಗಳೂ ಕೇಳಿಬಂದಿವೆ ಎಂದು ತಿಳಿಸಿದ್ದಾರೆ.

ಈ ಗೊಂದಲಗಳ ಕುರಿತು ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಹಳೆಯ ಮತ್ತು ಹೊಸ ಮತದಾರರ ಪಟ್ಟಿಯ ದತ್ತಾಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅರ್ಹ ಮತದಾರರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಜನವರಿಯಲ್ಲಿ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ ಚುನಾವಣೆಗಳನ್ನು ನಡೆಸಲು ಸರ್ಕಾರ ಬದ್ಧವಾಗಿದೆ ಎಂದು ಅವರು ತಿಳಿಸಿರುವುದಾಗಿ ವರದಿಯಾಗಿದೆ. ಆದರೆ, ಚುನಾವಣೆಗೆ ಯಾವ ಮತದಾರರ ಪಟ್ಟಿ ಬಳಸಬೇಕು ಎಂಬ ಕುರಿತು ಅಂತಿಮ ನಿರ್ಧಾರ ಇನ್ನೂ ಕೈಗೊಂಡಿಲ್ಲ.

 

ಆಂದೋಲನ ಡೆಸ್ಕ್

Recent Posts

ಫ್ರಾಂಕ್‌ಫರ್ಟ್‌ನಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ: 100ಕ್ಕೂ ಹೆಚ್ಚು ಪೊಲೀಸರಿಗೆ ಗಾಯ, 54 ಮಂದಿ ಬಂಧನ!

ಬರ್ಲಿನ್:‌ ಜರ್ಮನಿಯ ಪ್ರಮುಖ ವಾಣಿಜ್ಯ ನಗರ ಫ್ರಾಂಕ್‌ಫರ್ಟ್‌ನಲ್ಲಿ ನಡೆದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ನೀಡಿರುವ ವರದಿಯ ಪ್ರಕಾರ, ದುಷ್ಕರ್ಮಿಗಳು…

21 mins ago

ಚಂಡಮಾರುತದ ಪ್ರಭಾವ: ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನ ಮಳೆ ಮುನ್ಸೂಚನೆ!

ಬೆಂಗಳೂರು: ಅರ್ನಬ್‌ ಚಂಡಮಾರುತದ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ‘ಮುರುಸು’ ಚಂಡಮಾರುತದ ಪರಿಣಾಮ, ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನ ಮಳೆಯಾಗುವ ಸಾಧ್ಯತೆಯಿದೆ…

1 hour ago

ರಾಮಮಂದಿರ ದೇಣಿಗೆ ದುರುಪಯೋಗ ಆರೋಪ: ಸ್ಥಳೀಯ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯ ದುರುಪಯೋಗ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಕೆಯಾಗಿರುವ…

3 hours ago

ನೇಪಾಳದಲ್ಲಿ ಭಾರೀ ಹಿಮಪಾತ: ಸಂಕಷ್ಟದಲ್ಲಿ ಆರು ಮಂದಿ ಭಾರತೀಯರು

ಕಠ್ಮಂಡು: ನೇಪಾಳದಲ್ಲಿ ಭಾರೀ ಹಿಮಪಾತದಿಂದಾಗಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಮಂದಿ ಭಾರತೀಯ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ಸುರಕ್ಷಿತವಾಗಿ…

4 hours ago

ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡ ಮುರುಸು ಚಂಡಮಾರುತ: ಮೂರು ರಾಜ್ಯಗಳಲ್ಲಿ ಹೈಅಲರ್ಟ್‌

ವಿಶಾಖಪಟ್ಟಣ: ಆಂಧ್ರಪ್ರದೇಶ, ತಮಿಳುನಾಡು ಹಾಗೂ ಒಡಿಶಾದಲ್ಲಿ ಚಂಡಮಾರುತದ ಆತಂಕ ಎದುರಾಗಿದೆ. ನವೆಂಬರ್‌ 3ರ ಮುಂಜಾನೆ ಚಂಡಮಾರುತ ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸುವ…

5 hours ago

ನನ್ನ ವಿರುದ್ಧ ಇಡಿ–ಐಟಿ ದಾಳಿಗೆ ಒತ್ತಡ: ಪ್ರಿಯಾಂಕ್‌ ಖರ್ಗೆ ಆರೋಪ

ಬೆಂಗಳೂರು: ತಮ್ಮ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳ ವಿರುದ್ಧ ಇಡಿ ಮತ್ತು ಐಟಿ ದಾಳಿ ನಡೆಸಲು ಕೇಂದ್ರ ಸಚಿವರೊಬ್ಬರು ಒತ್ತಡ…

5 hours ago