ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಅಂಕಣಕಾರ ಸ್ವಪನ್‌ ದಾಸ್‌ಗುಪ್ತ ರಾಜೀನಾಮೆ

ಹೊಸದಿಲ್ಲಿ: ಅಂಕಣಕಾರ ಸ್ವಪನ್‌ ದಾಸ್‌ಗುಪ್ತ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆ ಹಿನ್ನೆಲೆಯಲ್ಲಿ ತಾರಕೇಶ್ವರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾರೆ. ನಾಮನಿರ್ದೇಶಿತ ರಾಜ್ಯಸಭಾ ಸದಸ್ಯರಾಗಿರುವ ದಾಸ್‌ಗುಪ್ತ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ರವಾನಿಸಿದ್ದ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎನ್ನಲಾಗಿದೆ.

ನಾಮನಿರ್ದೇಶಿತ ರಾಜ್ಯಸಭಾ ಸದಸ್ಯರಾಗಿರುವವರು ರಾಜಕೀಯ ಪಕ್ಷವೊಂದರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವೆ ಎಂದು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಪ್ರಶ್ನೆ ಮಾಡಿದ್ದಾರೆ.

× Chat with us