ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ ಪುರುಷಾರ್ಥಕ್ಕಾಗಿ ಮಾಡುತ್ತಿದ್ದಾರೋ ಗೊತ್ತಿಲ್ಲ. ಸಾಹಿತ್ಯ ಸಮ್ಮೇಳದಿಂದ ಯಾವುದೇ ಬದಲಾವಣೆ ಆಗಿಲ್ಲ ಎಂದು ಕನ್ನಡಪರ ಹೋರಾಡಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. …








