ಕನ್ನಡ ಚಿತ್ರರಂಗದಲ್ಲಿ ನಟರಾಗಿ, ನಿರ್ಮಾಪಕರಾಗಿ ಮತ್ತು ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಜಗ್ಗೇಶ್, ಇದೀಗ ಮಲ್ಲೇಶ್ವರದ ಮನೆಯ ಪಕ್ಕದಲ್ಲೇ ಒಂದು ಅತ್ಯಾಧುನಿಕ ಪೋಸ್ಟ್ ಪ್ರೊಡಕ್ಷನ್ ಸ್ಟುಡಿಯೋ ಪ್ರಾರಂಭಿಸಿದ್ದಾರೆ. ಚಿತ್ರರಂಗಕ್ಕೆ ಬೇಕಾದ ಹಲವು ಸೌಲಭ್ಯಗಳನ್ನು ಈ ಸ್ಟುಡಿಯೋದ ಮೂಲಕ ನಿರ್ಮಾಪಕರಿಗೆ ಕೊಡುವುದಕ್ಕೆ ಸಜ್ಜಾಗಿದ್ದಾರೆ. ಈಗಾಗಲೇ ಕೋಮಲ್ …