ಶ್ರೀನಗರ: ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜಮ್ಮು-ಕಾಶ್ಮೀರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಪಹಲ್ಗಾಮ್, ಬಲ್ತಾಲ್ ಮಾರ್ಗಗಳ ಮೂಲಕ ಸಾಗುವ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಜಮ್ಮು-ಕಾಶ್ಮೀರದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಾಹಿತಿ ನೀಡಿದ್ದಾರೆ. …




