ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕು ಕೇಂದ್ರವಾಗಿದ್ದರೂ ಸರ್ಕಾರದಿಂದ ೧೦೮ ಆಂಬ್ಯುಲೆನ್ಸ್ ಸೌಲಭ್ಯ ಕಲ್ಪಿಸದೇ ಇರುವುದರಿಂದ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೆ ಕೆಲವೊಮ್ಮೆ ಜೀವಹಾನಿಯಾಗುವ ಸಂಭವವಿರುತ್ತದೆ. ಶಾಸಕರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಎಚ್.ಡಿ.ಕೋಟೆ …

