ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಏಳು ಕೋಟಿ ರೂ.ಗೂ ಹೆಚ್ಚಿನ ಮೊತ್ತದ ದರೋಡೆ ಪ್ರಕರಣದಲ್ಲಿ ಮಹತ್ವದ ಸುಳಿವು ದೊರೆತಿದ್ದು, ಕೃತ್ಯಕ್ಕೆ ಬಳಸಿದ್ದ ಕಾರು ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಪತ್ತೆಯಾಗಿದೆ. ಘಟನೆ ನಡೆದ ತಕ್ಷಣವೇ ನಗರ ಪೊಲೀಸರು ಎಚ್ಚೆತ್ತುಕೊಂಡು ಆರೋಪಿಗಳ ಬೆನ್ನು ಹತ್ತಿದ್ದಾರೆ. …

