ಮಧ್ಯಪ್ರದೇಶದ ಗ್ವಾಲಿಯರ್‌ನ ಪೂಜಾ ಪರಾಶರ್ ೨೦೦೭ರಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದಾಗ ಇಡೀ ಕುಟುಂಬವೇ ಸಂಭ್ರಮಿಸಿತು. ಆದರೆ, ಆ ಸಂಭ್ರಮ ಸ್ವಲ್ಪವೇ ಹೊತ್ತಿನಲ್ಲಿ ಬತ್ತಿ ಹೋಯಿತು. ಏಕೆಂದರೆ, ಮಕ್ಕಳು ಅವಧಿಗೆ ಮೊದಲೇ ಜನಿಸಿದ್ದರಿಂದ ಅವುಗಳಲ್ಲಿ ಆರೋಗ್ಯದ ಸಮಸ್ಯೆ ಕಾಣಿಸಿಕೊಂಡಿತು. ನ್ಯೂರಾಲಾಜಿಸ್ಟ್‌ಗೆ ತೋರಿಸಿದಾಗ …










