ಮಂಡ್ಯ/ಶ್ರೀರಂಗಪಟ್ಟಣ: ಲೋಕಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಮಂಡ್ಯ ಜಿಲ್ಲೆಯ ಮಗ. ಪ್ರಸಕ್ತ ಚುನಾವಣೆಯಲ್ಲಿ ಅವರು ಗೆದ್ದರೆ ಅಭಿವೃದ್ಧಿ ಕೆಲಸಗಳು ಚುರುಕುಗೊಳ್ಳಲಿದ್ದು, ಜಿಲ್ಲೆಯ ಪ್ರಗತಿ ದೃಷ್ಠಿಯಿಂದ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿ ಎಂದು ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಮನವಿ ಮಾಡಿದರು. …