ಬೆಂಗಳೂರು: ಕಾವೇರಿಗಾಗಿ ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರನ್ನು ಹತ್ತಿಕ್ಕುವುದಿಲ್ಲ, ಬದಲಾಗಿ ಅಭಿನಂದನೆ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ಬಂದ್ ಹಿನ್ನಲೆಯಲ್ಲಿ ಬೆಂಗಳೂರಿನ ನಾಗರಿಕರು ಹಾಗೂ ಸಂಘಟನೆಗಳಿಗೆ ಅಭಿನಂದಿಸುವೆ. ಶಾಂತಿಯುತವಾಗಿ ಪ್ರತಿಭಟನೆ ಮಾಡ್ತಿದ್ದಾರೆ ಎಂದರು. …




