ಮಡಿಕೇರಿ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನೋರ್ವ ಡಿಪೋ ಸಮೀಪ ನಿರ್ವಾಹಕನಿಗೆ ಕೊಲೆ ಬೆದರಿಕೆಯೊಡ್ಡಿ ಗಾಳಿಯಲ್ಲಿ ಗುಂಡುಹಾರಿಸಿದ ಆರೋಪದಡಿಯಲ್ಲಿ ಬಂಧನಕ್ಕೊಳಗಾಗಿ ಕರ್ತವ್ಯದಿಂದ ಅಮಾನತುಗೊಂಡಿದ್ದಾರೆ. ಮಡಿಕೇರಿ-ಬಿರುನಾಣಿ ರೂಟ್ ಚಾಲಕ ವೇಣುಗೋಪಾಲ್ ಎಂಬಾತ ಮೊಬೈಲ್ ನಲ್ಲಿ ಮಾತನಾಡಿಕೊಂಡೇ ಬಸ್ ಚಾಲನೆ ಮಾಡುತ್ತಿದ್ದುದನ್ನು ಬಸ್ಸಿನಲ್ಲಿದ್ದವರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. …