ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರಿದಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಕಳೆದ ಕೆಲ ದಿನಗಳಿಂದ ಕೊಂಚ ಕಡಿಮೆಯಾಗಿದ್ದ ವರುಣ ಮತ್ತೆ ತನ್ನ ಆರ್ಭಟ ಶುರುಮಾಡಿದ್ದು, ನಿನ್ನೆಯಿಂದ ಧಾರಾಕಾರ ಮಳೆಯಾಗುತ್ತಿದೆ. …


