ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದ್ದು, ಇಂದು ಜಿಲ್ಲಾಡಳಿತದಿಂದ ರಾಜಮನೆತನಕ್ಕೆ ಅಧಿಕೃತ ಆಹ್ವಾನ ನೀಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಅರಮನೆಗೆ ಭೇಟಿ ನೀಡಿದ ಜಿಲ್ಲಾಡಳಿತವು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರಿಗೆ ದಸರಾಗೆ ಅಧಿಕೃತ ಆಹ್ವಾನ ನೀಡಿತು. …



