Mysore
28
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

encounter

Homeencounter

ಛತ್ತೀಸ್‌ಗಢ: ಇಲ್ಲಿನ ಬಿಜಾಪುರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 12 ಮಂದಿ ಹತರಾಗಿದ್ದಾರೆ. ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಾಹಿತಿ ಪ್ರಕಾರ 12 ಮಂದಿ …

ಭುವನೇಶ್ವರ: ಛತ್ತೀಸ್‌ಗಢದ ಗರಿಯಾಬಂದ್‌ ಜಿಲ್ಲೆಯ ಗಡಿಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಹಿರಿಯ ಕೇಡರ್‌ ಸೇರಿದಂತೆ 16 ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢ ಪೊಲೀಸರು ಗಡಿಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಕೇಂದ್ರ …

ದಂತೇವಾಡ: ಛತ್ತೀಸ್‌ಗಡದ ಬಸ್ತಾರ್‌ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ನಕ್ಸಲೀಯರ ಮುಖಾಮುಖಿಯಲ್ಲಿ ಜಿಲ್ಲಾ ಭದ್ರತಾ ಪೊಲೀಸ್‌ ಪಡೆಯ (DRG) ಹೆಡ್‌ ಕಾನ್ಸ್‌ಟೇಬಲ್‌ ಸನ್ನು ಕರಮ್‌ ಕೂಡಾ ಸಾವನ್ನಪ್ಪಿದ್ದಾರೆ ಎಂದು …

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಬೇಹಿಬಾಗ್‌ ಪ್ರದೇಶದಲ್ಲಿ ಉಗ್ರ ಶಂಕಾಸ್ಪದ ಓಡಾಟಗಳ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು. ಕಳೆದ ರಾತ್ರಿಯಿಂದಲೇ …

ಹೈದರಾಬಾದ್:‌ ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಇಂದು ಮುಂಜಾನೆ 7 ಮಂದಿ ಮಾವೋವಾದಿಗಳನ್ನು ಪೊಲೀಸರು ಹೊಡೆದುರುಳಿಸಿದ್ದಾರೆ. ಇಂದು ಮುಂಜಾನೆ 5.30ರ ವೇಳೆಗೆ ಚಲ್ಪಾಕ ಅರಣ್ಯದಲ್ಲಿ ಮಾವೋವಾದಿಗಳು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ. ಕೂಂಬಿಂಗ್‌ ಕಾರ್ಯಾಚರಣೆ ವೇಳೆ ಮಾವೋವಾದಿ ಗುಂಪನ್ನು ಗುರುತಿಸಿ …

ಬೆಂಗಳೂರು: ನಕ್ಸಲ್‌ ಚಟುವಟಿಕೆ ನಿಗ್ರಹಿಸಲು ವಿಕ್ರಂ ಗೌಡನನ್ನು ಎನ್‌ಕೌಂಟರ್‌ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ವಿಕ್ರಂಗೌಡ ಹತನಾಗಿರುವ ಬಗ್ಗೆ ಪ್ರಗತಿಪರ ಚಿಂತಕರು ಅನುಮಾನ ವ್ಯಕ್ತಪಡಿಸುತ್ತಿರುವ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ವಿಕ್ರಂಗೌಡನಿಗೆ ಶರಣಾಗುವಂತೆ ಆದೇಶ …

ಉಡುಪಿ: ಮೂರು ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ನಕ್ಸಲ್‌ ಮುಖಂಡ ವಿಕ್ರಂಗೌಡನನ್ನು ಎನ್‌ಕೌಂಟರ್‌ ಮಾಡಲಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದೆ. ಈ ವೇಳೆ ಮೋಸ್ಟ್‌ ವಾಂಟೆಡ್‌ ನಕ್ಸಲ್‌ …

ಶ್ರೀನಗರ: ಕಾಶ್ಮೀರದ ಬಾರಾಮುಲ್ಲಾ ಗಡಿ ರೇಖೆಯಲ್ಲಿ ಎನ್‌ಕೌಂಟರ್‌ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆ ಮಾಹಿತಿ ಆಧಾರದ ಮೇಲೆ ಉಗ್ರರ ಒಳನುಸುಳುವಿಕೆಯ ವಿರೋಧಿ ಕಾರ್ಯಾಚರಣೆ ಭಾಗವಾಗಿ ಉರಿ ಹಾಗೂ ಬಾರಾಮುಲ್ಲಾ ಗಡಿ ಪ್ರದೇಶದಲ್ಲಿ ಭಾರತೀಯ ಮತ್ತು …

ಛತ್ತೀಸಗಢ:  ಛತ್ತೀಸಗಢದ ಬಸ್ತಾರ್‌ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ಇಂದು(ಆ.4) ನಡೆದ ಎನ್‌ಕೌಂಟರ್‌ನಲ್ಲಿ 30 ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ಅಬುಜ್‌ಮದ್‌ ಅರಣ್ಯ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ …

ಶ್ರೀನಗರ: ಕಥುವಾದ ಮಂಡ್ಲಿಯಲ್ಲಿ ಸೇನಾ ಕಾರ್ಯಾಚರಣೆ ಮುಂದುವರಿದಿದ್ದು, ಉಗ್ರನೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಎರಡನೇ ದಿನದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯು ಉಗ್ರನೋರ್ವನನ್ನು ಗುಂಡಿಕ್ಕಿ ಕೊಂಡಿದ್ದು, ಇನ್ನುಳಿದವರಿಗಾಗಿ ಶೋಧಕಾರ್ಯ ಮುಂದುವರಿಸಲಾಗಿದೆ. ಭಯೋತ್ಪಾದಕರು ಇರುವಿಕೆಯ ಮಾಹಿತಿ ದೊರೆತ ಮೇಲೆ ಭದ್ರತಾ ಪಡೆಗಳು ಹದ್ದಿನ ಕಣ್ಣಿಟ್ಟಿದ್ದು, ಅಂದಿನಿಂದಲೂ …

  • 1
  • 2
Stay Connected​