ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯ ಬಹುತೇಕ ಭರ್ತಿಯಾಗಿದೆ. 2859 ಅಡಿ ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ ಈಗಾಗಲೇ 2849 ಅಡಿಗಳಷ್ಟು ನೀರು ಸಂಗ್ರಹವಾಗಿದ್ದು, ಜಲಾಶಯದ ಭದ್ರತೆಯ ದೃಷ್ಟಿಯಿಂದ ಜಲಾಶಯ ಭರ್ತಿಯಾಗಲು 10 ಅಡಿ ಬಾಕಿಯಿರುವಾಗಲೇ ನದಿಗೆ ನೀರನ್ನು ಹರಿಸಲಾಗಿದೆ. …










