ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಪರಿಷತ್ತಿನ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, 2025ರ ಮೇ, ಆಗಸ್ಟ್ ಮಾಹೆಯಲ್ಲಿ ಸ್ವಲ್ಪ ಕೊರತೆಯಾಗಿತ್ತು. ನಂತರ ರಸಗೊಬ್ಬರದ ಕೊರತೆಯಾಗಿಲ್ಲ ಎಂದು ಹೇಳಿದರು. …










