Mysore
26
light rain

Social Media

ಶನಿವಾರ, 13 ಜೂನ್ 2026
Light
Dark

Forest department

HomeForest department

ಮೈಸೂರು: ಬೇಸಿಗೆ ಆರಂಭವಾಗುತ್ತಿದ್ದಂರೆ ನಾಗರಹೊಳೆ ಅಭಯಾರಣ್ಯದಲ್ಲಿ ಪ್ರಾಣಿಗಳಿಗೆ ಕುಡಿಯಲು ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೇಸಿಗೆ ಆರಂಭವಾಗುತ್ತಿದ್ದಂತೆ ಅರಣ್ಯದಲ್ಲಿರುವ ಕೆರೆ ಕಟ್ಟೆಗಳು ಸಂಪೂರ್ಣ ಭತ್ತಿ ಹೋಗಿದ್ದು, ಕಾಡು ಪ್ರಾಣಿಗಳು ಕುಡಿಯಲು ನೀರಿಲ್ಲದೇ ಪರದಾಟ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಕಾಡು …

ಚಿಕ್ಕಮಗಳೂರು: ಇಲ್ಲಿನ ಭಾರೀ ಪ್ರಮಾಣದ ಕಾಡ್ಗಿಚ್ಚು ಸಂಭವಿಸಿದ್ದು, ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿರುವ ಘಟನೆ ಕಳಸ ತಾಲ್ಲೂಕಿನ ಹೊರನಾಡು ಸಮೀಪದಲ್ಲಿ ನಡೆದಿದೆ. ಮಂಗಳವಾರ ಸಂಜೆಯಿಂದಲೂ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಸಂಭವಿಸಿದ್ದು, ನೋಡನೋಡುತ್ತಿದ್ದಂತೆ ಅರಣ್ಯ ಬೆಂಕಿಯ ಕೆನ್ನಾಲಿಗೆಗೆ ಧಗೆ ಧಗನೆ ಉರಿಯುತ್ತಿದೆ. ಭಾರೀ …

ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಹತ್ತಾರು ಎಕರೆ ಅರಣ್ಯ ಪ್ರದೇಶ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ. ಯಾರೊ ಕಿಡಿಗೇಡಿಗಳು ಧೂಮಪಾನ ಮಾಡಲು ಹೋಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಉರಿ ಬಿಸಿಲಿನಿಂದ ಒಣಗಿ ನಿಂತ ಮರಗಿಡಗಳು …

ಚಾಮರಾಜನಗರ: ಜಿಲ್ಲೆಯಲ್ಲಿ ಚಿರತೆ ದಾಳಿಯು ಸ್ಥಳೀಯರಲ್ಲಿ ಭಾರೀ ಭೀತಿ ಹುಟ್ಟಿಸಿದ್ದು, ಎರಡು ದಿನಗಳ ಅಂತರದಲ್ಲೇ ಚಿರತೆ ದಾಳಿಗೆ ನಾಲ್ಕು ಕರುಗಳು ಬಲಿಯಾಗಿವೆ. ಗುಂಡ್ಲುಪೇಟೆ ತಾಲ್ಲೂಕಿನ ಹೊಂಗಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅರಣ್ಯ ಇಲಾಖೆ ವಿರುದ್ಧ ಅನ್ನದಾತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. …

ವಿರಾಜಪೇಟೆ: ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಇಬ್ಬರ ಮೇಲೆ ಕಾಡಾನೆಯೊಂದು ದಾಳಿ ನಡೆಸಿ ಗಂಭೀರ ಗಾಯಗೊಳಿಸಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತೂಬನಕೊಲ್ಲಿ ಗ್ರಾಮದಲ್ಲಿ ನಡೆದಿದೆ. ವಾಸುದೇವಯ್ಯ ಹಾಗೂ ಕಾರ್ಮಿಕ ಸಹರ್‌ …

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ ನಲ್ಲೂರು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ನಲ್ಲೂರು ಗ್ರಾಮದ ಕೊಕ್ಕಲೆಮಾಡ ದೇವಯ್ಯ ಎಂಬುವವರ ನಿವಾಸದ ಕಡೆಗೆ ತೆರಳುವ ರಸ್ತೆಯಲ್ಲಿ ಹುಲಿ ಸಾಗುತ್ತಿರುವ ದೃಶ್ಯ ಕಂಡುಬಂದಿದೆ. ಹುಲಿ ಕಾಣಿಸಿಕೊಂಡಿರುವ …

ಸರಗೂರು: ಬೆಳ್ಳಂಬೆಳಿಗ್ಗೆ ಜಮೀನಿನಲ್ಲಿ ನೀರು ಹಾಯಿಸಲು ಹೋದ ಯುವಕನ ಮೇಲೆ ಐದು ಆನೆಗಳು ದಾಳಿ ನಡೆಸಿದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಗದ್ದೆಹಳ್ಳ ಗ್ರಾಮದ ಬಳಿ ನಡೆದಿದೆ. ಗದ್ದೆಹಳ್ಳ ಗ್ರಾಮದ 24 ವರ್ಷದ ಅವಿನಾಶ್‌ …

ಬಂಡೀಪುರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ರಸ್ತೆಗೆ ಬಂದ ಗಜರಾಜನ ಜೊತೆ ಪ್ರವಾಸಿಗರು ಸೆಲ್ಫಿ ತೆಗೆದುಕೊಳ್ಳಲು ಹುಚ್ಚಾಟ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪೊಪ್ಪಿಕೊಂಡ ವ್ಯಕ್ತಿ ಈಗ ಅರಣ್ಯ ಇಲಾಖೆಗೆ ದಂಡ ಕಟ್ಟಿದ್ದಾರೆ. ರಸ್ತೆಗೆ ಬಂದ ಕಾಡಾನೆಯನ್ನು …

ಬಂಡೀಪುರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ರಸ್ತೆಗೆ ಬಂದ ಗಜರಾಜನ ಜೊತೆ ಪ್ರವಾಸಿಗರು ಸೆಲ್ಫಿ ತೆಗೆದುಕೊಳ್ಳಲು ಹುಚ್ಚಾಟ ನಡೆಸಿರುವ ಘಟನೆ ನಡೆದಿದೆ. ಬಂಡೀಪುರ ಅರಣ್ಯದಲ್ಲಿ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿದ್ದು, ಪ್ರವಾಸಿಗರು ಕಾಡು ಪ್ರಾಣಿಗಳ …

ಗದಗ: ಉತ್ತರ ಕರ್ನಾಟಕದ ಸೈಹಾದ್ರಿ, ಆಯುರ್ವೇದ ಔಷಧಿಯ ಸಸ್ಯಕಾಶಿ, ದೇಶದಲ್ಲಿಯೇ ಶುದ್ಧ ಗಾಳಿಗೆ ಹೆಸರಾದ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೇಸಿಗೆ ಆರಂಭಕ್ಕೂ ಮುನ್ನ ಕಪ್ಪತ್ತಗುಡ್ಡ ಬೆಂಕಿಗಾಹುತಿಯಾಗಿದ್ದು, ಮುಂಡರಗಿ ತಾಲ್ಲೂಕಿನ ಡೋಣಿ ಗ್ರಾಮದ ಬಳಿ ಗುಡ್ಡಕ್ಕೆ ಬೆಂಕಿ ಹತ್ತಿಕೊಂಡಿದೆ. ಡೋಣಿ ಬಳಿಯ …

Stay Connected​
error: Content is protected !!