ಚಾಮರಾಜನಗರ: ಜಿಲ್ಲೆಯಲ್ಲಿ ಚಿರತೆ ದಾಳಿಯು ಸ್ಥಳೀಯರಲ್ಲಿ ಭಾರೀ ಭೀತಿ ಹುಟ್ಟಿಸಿದ್ದು, ಎರಡು ದಿನಗಳ ಅಂತರದಲ್ಲೇ ಚಿರತೆ ದಾಳಿಗೆ ನಾಲ್ಕು ಕರುಗಳು ಬಲಿಯಾಗಿವೆ. ಗುಂಡ್ಲುಪೇಟೆ ತಾಲ್ಲೂಕಿನ ಹೊಂಗಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅರಣ್ಯ ಇಲಾಖೆ ವಿರುದ್ಧ ಅನ್ನದಾತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. …










