ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಕೆಪಿಎಸ್‌ಸಿ ನಡೆಸುವ ಪರೀಕ್ಷೆಗಳು ಸರಣಿ ಹಗರಣಗಳು, ಪ್ರಶ್ನೆ ಪತ್ರಿಕೆ ಸೋರಿಕೆ, ಡಿಜಿಟಲ್ ಮೌಲ್ಯಮಾಪನದಲ್ಲಿ ಲೋಪದೋಷಗಳು ಮತ್ತು ಭ್ರಷ್ಟಾಚಾರದ ಆರೋಪಗಳಿಂದ …









